ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟವನ್ನು ರಾಜ್ಯಪಾಲರು ಅಧಿಕೃತವಾಗಿ ವಿಸರ್ಜಿಸಲಾಗಿದ್ದು, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಪ್ರಮುಖ ಮುಖ್ಯಾಂಶಗಳು:
-
ಸಂಪುಟ ವಿಸರ್ಜನೆ: ರಾಜ್ಯಪಾಲರ ನಿರ್ದೇಶನದಂತೆ ಪಶ್ಚಿಮ ಬಂಗಾಳದ ಹಾಲಿ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ.
-
ರಾಜೀನಾಮೆ ಸಲ್ಲಿಕೆ: ಚುನಾವಣಾ ಫಲಿತಾಂಶಗಳ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗ ಸಂಪುಟ ವಿಸ್ತರಣೆಯ ನಂತ್ರ ಇನ್ನೂ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರದಂತೆ ಆಗಿದೆ.
-
ಚುನಾವಣಾ ಫಲಿತಾಂಶದ ಪ್ರಭಾವ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
-
ಮುಂದಿನ ನಡೆ: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಲಿದ್ದು, ಬಿಜೆಪಿ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿರುವ ಮುನ್ಸೂಚನೆಗಳಿವೆ.
ದಶಕಗಳ ಕಾಲ ಬಂಗಾಳವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಈ ಮೂಲಕ ದೊಡ್ಡ ಬ್ರೇಕ್ ಬಿದ್ದಂತಾಗಿದೆ.
ಪಶ್ಚಿಮ ಬಂಗಾಳ ಚುನಾವಣೆ ಬೆನ್ನಲ್ಲೇ ‘SIR’ ಮೇಲ್ಮನವಿ ನ್ಯಾಯಮಂಡಳಿ ಹುದ್ದೆಗೆ ನ್ಯಾ. ಟಿ.ಎಸ್. ಶಿವಜ್ಞಾನಂ ರಾಜೀನಾಮೆ








