Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಂಟಾವೈರಸ್ ಭೀತಿ: ಕ್ರೂಸ್ ಹಡಗಿನ ಬೆನ್ನಲ್ಲೇ ವಿಮಾನ ಸಿಬ್ಬಂದಿ ಆಸ್ಪತ್ರೆಗೆ ದಾಖಲು; ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ!

Rain Alert : ಬೆಂಗಳೂರು ಸೇರಿ ರಾಜ್ಯದ ಹಲವಡೆ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದ `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ರೇಷನ್ ಜೊತೆಗೆ 2 ಕೆಜಿ ರಾಗಿ ವಿತರಣೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ರೇಷನ್ ಜೊತೆಗೆ 2 ಕೆಜಿ ರಾಗಿ ವಿತರಣೆ.!
KARNATAKA

ರಾಜ್ಯದ `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ರೇಷನ್ ಜೊತೆಗೆ 2 ಕೆಜಿ ರಾಗಿ ವಿತರಣೆ.!

By kannadanewsnow57

ಬೆಂಗಳೂರು: ರಾಜ್ಯದ ಬಿಪಿಎಲ್ (BPL) ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಪ್ರತಿ ತಿಂಗಳು ಅಕ್ಕಿಯ ಜೊತೆಗೆ 2 ಕೆಜಿ ರಾಗಿಯನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ.

ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಒಟ್ಟು 10 ಕೆಜಿ ಅಕ್ಕಿಯ ಕೋಟಾದಲ್ಲಿ, ಇನ್ಮುಂದೆ 2 ಕೆಜಿ ರಾಗಿಯನ್ನು ಸೇರಿಸಲಾಗುವುದು. ರಾಜ್ಯದಲ್ಲಿ ಸದ್ಯ 1.14 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, ಒಟ್ಟು 4.01 ಕೋಟಿ ಸದಸ್ಯರಿದ್ದಾರೆ. ಇವರಿಗೆ ವಿತರಿಸಲು ಪ್ರತಿ ತಿಂಗಳು ಸುಮಾರು 57 ಸಾವಿರ ಮೆಟ್ರಿಕ್ ಟನ್ ರಾಗಿಯ ಅಗತ್ಯವಿದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ನಿಗಮವು ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ 5.2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಿ ಸಂಗ್ರಹಿಸಿಟ್ಟುಕೊಂಡಿದೆ. ಇದು ಮುಂದಿನ 10 ತಿಂಗಳ ವಿತರಣೆಗೆ ಸಾಕಾಗಲಿದೆ. ಹೆಚ್ಚುವರಿ ಎನಿಸುವ ಸುಮಾರು 20 ರಿಂದ 30 ಸಾವಿರ ಮೆಟ್ರಿಕ್ ಟನ್ ರಾಗಿಯನ್ನು ಬೇರೆ ರಾಜ್ಯಗಳಿಗೆ ನೀಡಲು ನಿಗಮವು ತೀರ್ಮಾನಿಸಿದೆ.

ನೋಂದಾಯಿತ ರೈತರಿಗೆ ಮೇ 15ರವರೆಗೆ ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಈ ತಿಂಗಳಿನಿಂದಲೇ ಪಡಿತರ ಕೇಂದ್ರಗಳಲ್ಲಿ ರಾಗಿ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ. ಈ ಕ್ರಮವು ರಾಜ್ಯದ ಜನರ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸುವ ಜೊತೆಗೆ, ಸ್ಥಳೀಯವಾಗಿ ಬೆಳೆಯುವ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

Good news for the state's `BPL' card holders: 2 kg of millet distributed along with ration!
Share. Facebook Twitter LinkedIn WhatsApp Email

Related Posts

Rain Alert : ಬೆಂಗಳೂರು ಸೇರಿ ರಾಜ್ಯದ ಹಲವಡೆ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

1 Min Read

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

1 Min Read

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `LKG’ ಯಿಂದಲೇ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ.!

1 Min Read
Recent News

ಹಂಟಾವೈರಸ್ ಭೀತಿ: ಕ್ರೂಸ್ ಹಡಗಿನ ಬೆನ್ನಲ್ಲೇ ವಿಮಾನ ಸಿಬ್ಬಂದಿ ಆಸ್ಪತ್ರೆಗೆ ದಾಖಲು; ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ!

Rain Alert : ಬೆಂಗಳೂರು ಸೇರಿ ರಾಜ್ಯದ ಹಲವಡೆ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದ `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ರೇಷನ್ ಜೊತೆಗೆ 2 ಕೆಜಿ ರಾಗಿ ವಿತರಣೆ.!

ಎಚ್ಚರ! ಹಾವು ಕಂಡಾಗ ಮರೆತೂ ಈ ತಪ್ಪುಗಳನ್ನು ಮಾಡಬೇಡಿ: ನಿಮ್ಮ ಸುರಕ್ಷತೆಗಾಗಿ ಇಲ್ಲಿವೆ ಅಗತ್ಯ ಟಿಪ್ಸ್

State News
KARNATAKA

Rain Alert : ಬೆಂಗಳೂರು ಸೇರಿ ರಾಜ್ಯದ ಹಲವಡೆ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕನ್ನಡಿಗರಿಗೆ ವರುಣ ದೇವ ತಂಪೆರೆದಿದ್ದಾನೆ. ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ ಉಷ್ಣಾಂಶಕ್ಕೆ ಸಾಕ್ಷಿಯಾಗಿದ್ದ…

ರಾಜ್ಯದ `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ರೇಷನ್ ಜೊತೆಗೆ 2 ಕೆಜಿ ರಾಗಿ ವಿತರಣೆ.!

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `LKG’ ಯಿಂದಲೇ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.