ಕೊಪ್ಪಳ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಬಹುದೊಡ್ಡ ಸರ್ಕಸ್ ನಡೆದಿದ್ದು, ಇದರ ಮಧ್ಯ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ದೊಡ್ಡ ಅಪಾಯ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆದರೆ ಕರ್ನಾಟಕವನ್ನು 10 ಬಾರಿ ಮಾರಾಟ ಮಾಡುತ್ತಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಒಂದು ಬಾರಿ ಕರ್ನಾಟಕವನ್ನು ಮಾರಾಟ ಮಾಡಿದ್ದಾರೆ. ಡಿಕೆ ಶಿವಕುಮಾರ್ 10 ಬಾರಿ ಕರ್ನಾಟಕ ಮಾರಾಟ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.








