ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ಮಾಹೆಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಅದರಂತೆ ಪಡಿತರ ಚೀಟಿದಾರರಿಗೆ ಎರಡು ಮಾಹೆಗಳ ಅಕ್ಕಿಯನ್ನು ಒಂದೇ ಬಾರಿಗೆ ಹಂಚಿಕೆ ಮಾಡಲಾಗುವುದು.
ಅಂತ್ಯೋದಯ ಕಾರ್ಡು ಹೊಂದಿದ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿ ಯಂತೆ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಕಾರ್ಡು ಹೊಂದಿದ ಪ್ರತಿ ಸದಸ್ಯರಿಗೆ 5 ಕೆ.ಜಿ ಯಂತೆ ಪಡಿತರ ಚೀಟಿಯಲ್ಲಿನ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಯಂತೆ ಅಕ್ಕಿ ವಿತರಣೆ ಮಾಡಲಾಗುವುದು.
ಮೇ ಹಾಗೂ ಜೂನ್ ತಿಂಗಳ ಪಡಿತರವನ್ನು ಒಟ್ಟಿಗೆ ಪಡೆಯುವ ಸಂದರ್ಭದಲ್ಲಿ, ಕಾರ್ಡುದಾರರು ತಾಂತ್ರಿಕ ದಾಖಲೀಕರಣಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು ಕಡ್ಡಾಯವಾಗಿದೆ. ಎರಡು ಬಾರಿ ಬೆರಳು ಮುದ್ರೆ ನೀಡಿದ ನಂತರವಷ್ಟೇ ಪೂರ್ಣ ಪ್ರಮಾಣದ ಧಾನ್ಯ ಲಭ್ಯವಾಗಲಿದೆ. ಪಡಿತರ ಚೀಟಿದಾರರು ಮೇ ಮಾಹೆಯಲ್ಲಿಯೇ ಎರಡು ತಿಂಗಳ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ








