ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮನೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಗೇಟ್ ಬಿದ್ದು ಒಂದು ಮಗು ಸಾವನ್ನಪ್ಪಿ, ಮತ್ತೊಂದು ಮಗು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರ ದಲ್ಲಿ ನಡೆದಿದೆ.
ಇಮಾಮ್ ಮತ್ತು ರಮೀಜಾ ದಂಪತಿಗಳ ಮಗು ಮೃತ ಗೌಸಿಯಾ(5) ಮೃತ ಮಗು. ಇಮಾಮ್ ತಂಗಿ ಶಕೀಲಾ ಅವರ ಮಗು ಸುಮಯ(03) ಎಂಬ ಮಗುವಿಗೆ ಕಾಲು ಮುರಿದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲು ಮುರಿತಕ್ಕೆ ಒಳಗಾದ ಮಗು ಆಸ್ಪತ್ರೆಗೆ ದಾಖಲೀಸಲಾಗಿದೆ. ದ್ವಾರಕಾನಗರದ ಲ್ಲಿರುವ ಮನೆ ರವಿಶಂಕರ್ ಅವರಿಗೆ ಸೇರಿದ್ದಾ ಗಿದೆ. ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು.
ದಂಪತಿಗಳು ಬಸ್ ನಿಲ್ದಾಣದ ಬಳಿ ಹಣ್ಣು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಈಗ ಮಗುವನ್ನು ಕಳೆದುಕೊಂಡ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕೆ ಮರಣೋ ತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸ ಲಾಗಿದೆ. ಈ ಸಂಬಂಧ ಚಿಕ್ಕಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








