ಬೆಂಗಳೂರು : ಶ್ವಾಸಕೋಶ ಸೋಂಕಿನಿಂದ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ ಸುಧಾಕರ್ ಇಂದು ನಿಧನರಾಗಿದ್ದಾರೆ. ಸಚಿವ ಡಿ ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕರಾದ ಆರ್ ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ… pic.twitter.com/2OO7VvWLrs
— Siddaramaiah (@siddaramaiah) May 10, 2026
ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು.
ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ. ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ… pic.twitter.com/GFngq5BAYt
— DK Shivakumar (@DKShivakumar) May 10, 2026







