ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಿತ್ರದುರ್ಗಕ್ಕೆ ಇಂದು ಸರ್ಕಾರ ರಜೆ ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 3 ದಿನ ಸಂತಾಪ ಕೋರಲು ತಿಳಿಸಲಾಗಿದೆ. ಇನ್ನು ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ರಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.
ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದಲಾಗಿದೆ.








