Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ರಾಜ್ಯದ ಗಡಿಭಾಗದಲ್ಲಿ ಭೀಕರ ದುರಂತ: ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು – ಹಲವರಿಗೆ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
KARNATAKA

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow57

ಬೆಂಗಳೂರು: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಈ ವಾರ ರಾಜ್ಯದ ವಿವಿಧೆಡೆ ಗುಡುಗು, ಗಾಳಿ ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರದಿಂದಲೇ ಮಳೆ ಅಬ್ಬರ ಶುರುವಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೇ 11 ರಿಂದ 15 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 15 ಮತ್ತು 16 ರಂದು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಿರಲಿದ್ದು, ಮೇ 15 & 16 ರಂದು ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳದಲ್ಲಿ ಮೇ 11 ರಿಂದ 13 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರಲಿದೆ. ಆದರೆ, ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯೂ ಇದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಜೊತೆಗೆ ಬಳ್ಳಾರಿ ಮತ್ತು ವಿಜಯನಗರ ಭಾಗದಲ್ಲಿ ಮಳೆ ಅಬ್ಬರಿಸಲಿದೆ. ಭಾನುವಾರ (ಮೇ 17) ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರದಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Rain Alert : Heavy rain for next 4-5 days across the state : Meteorological Department forecast
Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

2 Mins Read

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

1 Min Read
Recent News

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ರಾಜ್ಯದ ಗಡಿಭಾಗದಲ್ಲಿ ಭೀಕರ ದುರಂತ: ದೇವಸ್ಥಾನದ ಗೋಡೆ ಕುಸಿದು 6 ಮಂದಿ ಸಾವು – ಹಲವರಿಗೆ ಗಾಯ

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

State News
KARNATAKA

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

By ಸುರೇಶ್‌ KARNATAKA 1 Min Read

ಮಂಗಳೂರು : ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35ಲಕ್ಷ ರೂ‌. ಮೌಲ್ಯದ 1.42 ಕೆ.ಜಿ.…

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

BIG NEWS : ದಕ್ಷಿಣಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ, ಬರೋಬ್ಬರಿ 22 ಕೋಟಿ ‘ಗೃಹಲಕ್ಷ್ಮೀ’ ಹಣ ಜಮೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.