ಬೆಳಗಾವಿ : ಬೆಳಗಾವಿ ನಗರದ ಅಜಂ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ನಿವಾಸಿಯಾಗಿರುವ ಕಾವೇರಿ ಉಮೇಶ ನಾಯಕ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಅವರು ಬಿಎಸ್ಸಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು.
ಇಂದು ತನ್ನ ಜನ್ಮದಿನದಂದೇ ಕಾವೇರಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ. ಕಳೆದ ಮೂರು ತಿಂಗಳ ಹಿಂದಷ್ಟೇ ಕಾವೇರಿಯ ನಿಶ್ಚಿತಾರ್ಥ ನಡೆದಿದ್ದು, ಪೊಲೀಸ್ ಪೇದೆಯೊಬ್ಬರೊಂದಿಗೆ ಮದುವೆ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಮಾಹಿತಿ ತಿಳಿದು ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







