ನವದೆಹಲಿ: ಕಾಂಗ್ರೆಸ್ ಸಂಸದೀಯ ಮಂಡಳಿಯ ಅಧ್ಯಕ್ಷೆ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಬುಧವಾರ ಹರಿಯಾಣದ ಗುರುಗ್ರಾಮದಲ್ಲಿರುವ ಖ್ಯಾತ ಮೆದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲಗಳ ಪ್ರಕಾರ, ಅವರು ಒಂದು ಸಣ್ಣ ಶಸ್ತ್ರಚಿಕಿತ್ಸೆಗೆ (Minor Surgery) ಒಳಗಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ತಂಡವು ಅವರ ಮೇಲೆ ನಿಗಾ ಇಟ್ಟಿದೆ.
ಕಳೆದ ಕೆಲವು ತಿಂಗಳುಗಳಿಂದ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಮಾರ್ಚ್‌ನಲ್ಲಿಯೂ ಅವರು ಸೋಂಕಿನ ಕಾರಣ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
79 ವರ್ಷದ ಸೋನಿಯಾ ಗಾಂಧಿ ಅವರಿಗೆ ದೆಹಲಿಯ ಚಳಿ ಮತ್ತು ಮಾಲಿನ್ಯದಿಂದಾಗಿ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಇಂದು ನಡೆಸಲಾಗುವ ಶಸ್ತ್ರಚಿಕಿತ್ಸೆಯ ಬಗ್ಗೆ ಆಸ್ಪತ್ರೆ ಅಥವಾ ಪಕ್ಷದ ವತಿಯಿಂದ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.
Congress Parliamentary Party chairperson Sonia Gandhi admitted to Medanta, Gurugram, to undergo a minor procedure, say sources
(file pic) pic.twitter.com/zMhFedLpLK
— ANI (@ANI) May 13, 2026






