Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗಿಗಳ ವಜಾ: ಲಾಭದಲ್ಲಿದ್ದರೂ ‘ಕೈ’ ಕೊಟ್ಟ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಬ್ಬರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow57

ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಾರ್ವಜನಿಕರಿಗೆ ಆರೋಗ್ಯ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ.

‎ಸಾರ್ವಜನಿಕರು ಬೇಸಿಗೆ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಮುಖ ಆರೋಗ್ಯ ಸಲಹೆಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದ್ದು, ಅವುಗಳು ಇಂತಿವೆ.
‎ನೀರಿನ ಸೇವನೆ: ಈ ಸಮಯದಲ್ಲಿ ಹೆಚ್ಚು ನೀರಿನ ಸೇವನೆ ಮಾಡಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ದಿನವಿಡೀ ಸಾಕಷ್ಟು ನೀರು ಕುಡಿಯುತ್ತಿರಬೇಕು.
‎ತಂಪು ಪಾನೀಯಗಳ ಆಯ್ಕೆ: ಬೇಸಿಗೆ ಸಮಯದಲ್ಲಿ ನಿಂಬೆ ನೀರು, ಮಜ್ಜಿಗೆ, ಎಳೆನೀರು ಮತ್ತು ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಹೆಚ್ಚಾಗಿ ಬಳಸುವುದು ಸೂಕ್ತವಾಗಿದೆ.

‎ಆಹಾರ ಕ್ರಮ: ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ ಹಾಗೂ ದ್ರಾಕ್ಷಿಯಂತಹ ನೀರಿನ ಅಂಶ ಹೆಚ್ಚಿರುವ ಹಣ್ಣು- ತರಕಾರಿಗಳನ್ನು ಹೆಚ್ಚು ಸೇವಿಸಬೇಕು.

‎ಬಟ್ಟೆ ಧರಿಸುವುದು: ಹಗುರವಾದ, ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ಸೂಕ್ತ.

‎ಹೊರಹೋಗುವಾಗ ಜಾಗ್ರತೆ: ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಛತ್ರಿ, ಟೋಪಿ, ಕಪ್ಪು ಕನ್ನಡಕ ಹಾಗೂ ಚಪ್ಪಲಿಗಳನ್ನು ಬಳಸಬೇಕು.

‎ಪ್ರಥಮ ಚಿಕಿತ್ಸೆ: ಬಿಸಿಲಿನಿಂದ ಯಾರಾದರೂ ಪ್ರಜ್ಞೆ ತಪ್ಪಿದರೆ, ತಕ್ಷಣ ಅವರಿಗೆ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಒದ್ದೆ ಬಟ್ಟೆಯಿಂದ ಅವರ ಮೈ ಒರೆಸಬೇಕು ಹಾಗೂ ವೈದ್ಯರನ್ನು ಸಂಪರ್ಕಿಬೇಕು.

‎ಸಭೆ-ಸಮಾರಂಭ: ಹೊರಾಂಗಣ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಬೆಳಗ್ಗೆ ಅಥವಾ ಸಂಜೆ ಆಯೋಜಿಸಿ, ಜನರಿಗೆ ನೆರಳು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು.

‎ಪ್ರಾಣಿಗಳ ರಕ್ಷಣೆ: ಬೇಸಿಗೆಯಲ್ಲಿ ಸಾಕು ಪ್ರಾಣಿಗಳ ಮೇಲೆಯು ನಿಗಾ ವಹಿಸುವುದು ಅತ್ಯವಶ್ಯಕವಾಗಿದ್ದು, ಅವುಗಳನ್ನು ನೆರಳಿನಲ್ಲಿರಿಸಿ. ಪ್ರಾಣಿಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು.

‎ವಾಹನಗಳ ಜಾಗ್ರತೆ: ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಒಬ್ಬರೇ ಬಿಟ್ಟು ಹೋಗಬೇಡಿ.

‎ತಪ್ಪಿಸಬೇಕಾದವು: ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಅತಿಯಾದ ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಸೇವಿಸಬೇಡಿ.

‎ವಿಶೇಷವಾಗಿ ಕೆರೆ, ಬಾವಿ ಅಥವಾ ಕಾಲುವೆಗಳ ಹತ್ತಿರ ಮಕ್ಕಳು ಹೋಗದಂತೆ ನೋಡಿಕಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಟಿ.ಲಿಂಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ALERT: Health Department issues guidelines to avoid summer heat in the state: Compliance with these rules is mandatory
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗಿಗಳ ವಜಾ: ಲಾಭದಲ್ಲಿದ್ದರೂ ‘ಕೈ’ ಕೊಟ್ಟ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಬ್ಬರ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

State News
KARNATAKA

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow57 KARNATAKA 2 Mins Read

ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.