ನವದೆಹಲಿ:ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ತಲಾ 3 ರೂಪಾಯಿ ಹೆಚ್ಚಿಸಿವೆ. ವಾರಗಳಿಂದ ಸ್ಥಿರವಾಗಿದ್ದ ಇಂಧನ ದರವು ಈಗ ಏರಿಕೆಯ ಹಾದಿ ಹಿಡಿದಿರುವುದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದಂತಾಗಿದೆ.
ಪೆಟ್ರೋಲ್ ದರವು ಲೀಟರ್‌ಗೆ 3 ರೂ. ಏರಿಕೆಯಾಗಿದ್ದು, ದೆಹಲಿಯಲ್ಲಿ ಹಳೆಯ ದರ 94.77 ರೂ. ನಿಂದ 97.77 ರೂ. ಗೆ ತಲುಪಿದೆ. ಅದೇ ರೀತಿ ಡೀಸೆಲ್ ದರವು 87.67 ರೂ. ನಿಂದ 90.67 ರೂ. ಗೆ ಏರಿಕೆಯಾಗಿದೆ.
ಕೇವಲ ಪೆಟ್ರೋಲ್-ಡೀಸೆಲ್ ಮಾತ್ರವಲ್ಲದೆ, ಸಿಎನ್‌ಜಿ (CNG) ದರದಲ್ಲೂ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಹೊಸ ದರ 79.09 ರೂ. ಆಗಿದೆ.
ಹಾರ್ಮುಜ್ ಜಲಸಂಧಿ (Strait of Hormuz) ಮುಚ್ಚಲ್ಪಟ್ಟಿರುವ ಕಾರಣ ಭಾರತದ ಇಂಧನ ಆಮದಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದಾಗಿ ತೈಲ ಕಂಪನಿಗಳು ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.








