Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Money

ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 96 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan
KARNATAKA

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

By ವಸಂತ ಬಿ ಈಶ್ವರಗೆರೆ
ಬೆಂಗಳೂರು: ಕೊಲೆ ಪ್ರಕರಣದ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಇನ್ನು ಕನಿಷ್ಠ ಒಂದು ವರ್ಷಗಳ ಕಾಲ ಅವರು ಜೈಲಿನಲ್ಲೇ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ಆರೋಗ್ಯದ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳನ್ನು ಮುಂದುವರಿಸಿ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದೆ. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕೋರ್ಟ್, ಒಂದು ವರ್ಷದ ಬಳಿಕ ಬೇಕಿದ್ದರೆ ದರ್ಶನ್ ಅವರು ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್‌ನ ಈ ಮಹತ್ವದ ಆದೇಶದಿಂದಾಗಿ ದರ್ಶನ್ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಪ್ರಕರಣದ ಹಿನ್ನೆಲೆ: 2024ರ ಜೂನ್ 11ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್, ತೀವ್ರ ಬೆನ್ನು ನೋವಿನ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಆರೋಗ್ಯದ ಆಧಾರದ ಮೇಲೆ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಆದರೆ, ಹೈಕೋರ್ಟ್ ನೀಡಿದ್ದ ಜಾಮೀನಿನಲ್ಲಿ ತಾಂತ್ರಿಕ ಹಾಗೂ ಕಾನೂನಾತ್ಮಕ ಲೋಪಗಳಿವೆ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂ ಕೋರ್ಟ್, 2025ರ ಆಗಸ್ಟ್‌ನಲ್ಲಿ ದರ್ಶನ್ ಅವರ ಜಾಮೀನನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಅವರು ಮತ್ತೆ ಜೈಲು ಪಾಲಾಗಬೇಕಾಯಿತು. ಈ ನಡುವೆ ಜೈಲಿನಲ್ಲಿ ವಿಐಪಿ ಆತಿಥ್ಯ ಪಡೆದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೂ ಶಿಫ್ಟ್ ಮಾಡಲಾಗಿತ್ತು, ತದನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲಾಗಿತ್ತು.

ಸದ್ಯದ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪ್ರಕರಣದ ತನಿಖೆ ಮತ್ತು ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ ಅಂದರೆ ಇನ್ನು ಒಂದು ವರ್ಷಗಳ ಕಾಲ ದರ್ಶನ್ ಜೈಲಿನಲ್ಲೇ ಉಳಿಯಲಿದ್ದಾರೆ

Share. Facebook Twitter LinkedIn WhatsApp Email

Related Posts

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

1 Min Read

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

3 Mins Read

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

1 Min Read
Recent News
Money

ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ: 96 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

BREAKING: ವಿವಾದಿತ ಭೋಜಶಾಲಾ ಸ್ಥಳವನ್ನು ದೇವಾಲಯವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್

State News
KARNATAKA

BIG BREAKING: ನಟ ದರ್ಶನ್‌ಗೆ ಬಿಗ್ ಶಾಕ್: ಇನ್ನು ಒಂದು ವರ್ಷ ಜಾಮೀನಿಲ್ಲ, ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ! | Actor Darshan

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕೊಲೆ ಪ್ರಕರಣದ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ದರ್ಶನ್…

ನಾಯಕತ್ವ ಬದಲಾವಣೆ ತಿಕ್ಕಾಟದ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ!

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.