ಕೋಲಾರ : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎನಮರೇಪಲ್ಲಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಮುನಿರಾಜು (43) ಷಣಸಮಾಕಲಹಳ್ಳಿಯ ಸತೀಶ್ (38) ಮೃತಪಟ್ಟವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿ ಇದ್ದ ಕೆಲವರಿಗೂ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








