Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಕ್ಕೆ ಮತ್ತೆ ಮೂವರು ಬಲಿ : ಅಪಾರ ಬೆಳೆ ನಾಶ

BIG NEWS: ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಬೇಕೇ? ಅಧಿಕಾರಿಗಳ ನವೀಕೃತ ಫೋನ್ ನಂಬರ್ ಪಟ್ಟಿ ಇಲ್ಲಿದೆ | Karnataka Lokayukta

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಕ್ಕೆ ಮತ್ತೆ ಮೂವರು ಬಲಿ : ಅಪಾರ ಬೆಳೆ ನಾಶ
KARNATAKA

ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಕ್ಕೆ ಮತ್ತೆ ಮೂವರು ಬಲಿ : ಅಪಾರ ಬೆಳೆ ನಾಶ

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಭಾನುವಾರ ಸುರಿದ ಭಾರಿ ಮಳೆ ಮತ್ತು ಸಿಡಿಲಿನ ಆರ್ಭಟಕ್ಕೆ ಮೂವರು ಬಲಿಯಾಗಿದ್ದಾರೆ. ಧಾರವಾಡ, ರಾಯಚೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಕೊಪ್ಪಳ, ವಿಜಯನಗರ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಧಾರವಾಡ ತಾಲೂಕಿನ ಕವಲಗೇರಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗೆ ಸಿಡಿಲು ಬಡಿದಿದ್ದು, ಜಯಶ್ರೀ ಹನುಮಂತಪ್ಪ ಶಿರಹಟ್ಟಿ (36) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಹನುಮಂತಪ್ಪ ತೀವ್ರ ಗಾಯಗೊಂಡಿದ್ದಾರೆ. ಹೊನ್ನಾವರ (ಉತ್ತರ ಕನ್ನಡ) ಅಪರಕೊಂಡದ ಕಡಲತೀರದಲ್ಲಿ ಶನಿವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ವಿನಾಯಕ ಹಾವಿಕ (35) ಎಂಬುವವರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ತೀರದಲ್ಲಿದ್ದ ಕೆಲವು ಪ್ರವಾಸಿಗರಿಗೂ ಸಿಡಿಲಿನ ಆಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ಗೆ ಗೊಬ್ಬರ ತುಂಬಿಸುತ್ತಿದ್ದ ವೇಳೆ ಸಿಡಿಲು ಬಡಿದು ಕರಿಯಪ್ಪ ಗೆಣ್ಣಿಹಾಳ (45) ಎಂಬುವವರು ಮೃತಪಟ್ಟಿದ್ದಾರೆ.

ಶಿವಮೊಗ್ಗ, ಧಾರವಾಡ, ಉತ್ತರ ಕನ್ನಡ, ಗದಗ, ಯಾದಗಿರಿ, ವಿಜಯನಗರ, ಉಡುಪಿ, ದಾವಣಗೆರೆ, ಹಾವೇರಿ ಮತ್ತು ಕೊಪ್ಪಳ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸುರಿದ ಭಾರಿ ಮಳೆಗೆ ಜೋನಿ ಹಳ್ಳ ತುಂಬಿ ಹರಿದು ರಸ್ತೆಯ ಮೇಲೆ ನೀರು ಬಂದಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಸಿಡಿಲು ಬಡಿದು ಮೂರು ಜಾನುವಾರುಗಳು ಮೃತಪಟ್ಟಿವೆ. ಹುಬ್ಬಳ್ಳಿಯಲ್ಲಿ ಬಿರುಗಾಳಿಗೆ 10ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ.

ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಗೆ ರಾಜ್ಯದ ಹಲವೆಡೆ ರೈತರು ಕಣ್ಣೀರು ಹಾಕುವಂತಾಗಿದೆ. ಕೊಪ್ಪಳ ತಾಲೂಕಿನಲ್ಲಿ 100 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕೊಂಗಲಹಟ್ಟಿಯಲ್ಲಿ 200ಕ್ಕೂ ಹೆಚ್ಚು ಪಪ್ಪಾಯಿ ಗಿಡಗಳು ನೆಲಕಚ್ಚಿವೆ. ದಾವಣಗೆರೆ ಜಿಲ್ಲೆಯ ಹರಿಹರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು 622 ಎಕರೆ ಪ್ರದೇಶದ ಭತ್ತ, ಮೆಕ್ಕೆಜೋಳ ಹಾಗೂ ನೂರಾರು ಅಡಿಕೆ ಮರಗಳು ಹಾನಿಗೊಳಗಾಗಿವೆ. ಚನ್ನಗಿರಿ ತಾಲೂಕೊಂದರಲ್ಲೇ ಸುಮಾರು 540 ಎಕರೆ ಭತ್ತದ ಬೆಳೆ ನಾಶವಾಗಿದೆ.

Three more die in summer rains in the state: Huge crop damage
Share. Facebook Twitter LinkedIn WhatsApp Email

Related Posts

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

2 Mins Read

BIG NEWS: ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಬೇಕೇ? ಅಧಿಕಾರಿಗಳ ನವೀಕೃತ ಫೋನ್ ನಂಬರ್ ಪಟ್ಟಿ ಇಲ್ಲಿದೆ | Karnataka Lokayukta

1 Min Read

ರಾಜ್ಯಾದ್ಯಂತ ಇಂದಿನಿಂದ `SSLC ಪರೀಕ್ಷೆ-2’ : 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ | SSLC Exam-2

1 Min Read
Recent News

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಕ್ಕೆ ಮತ್ತೆ ಮೂವರು ಬಲಿ : ಅಪಾರ ಬೆಳೆ ನಾಶ

BIG NEWS: ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಬೇಕೇ? ಅಧಿಕಾರಿಗಳ ನವೀಕೃತ ಫೋನ್ ನಂಬರ್ ಪಟ್ಟಿ ಇಲ್ಲಿದೆ | Karnataka Lokayukta

ರಾಜ್ಯಾದ್ಯಂತ ಇಂದಿನಿಂದ `SSLC ಪರೀಕ್ಷೆ-2’ : 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ | SSLC Exam-2

State News
KARNATAKA

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಔಷಧಿಗಳ ದರ ಶೇ.20 ರಷ್ಟು ಏರಿಕೆ | Medicine prices Hike

By kannadanewsnow57 KARNATAKA 2 Mins Read

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಜಾಗತಿಕ ಪರಿಣಾಮಗಳು ಇದೀಗ ನೇರವಾಗಿ ಭಾರತದ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿವೆ. ಇಂಧನ…

ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಕ್ಕೆ ಮತ್ತೆ ಮೂವರು ಬಲಿ : ಅಪಾರ ಬೆಳೆ ನಾಶ

BIG NEWS: ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಬೇಕೇ? ಅಧಿಕಾರಿಗಳ ನವೀಕೃತ ಫೋನ್ ನಂಬರ್ ಪಟ್ಟಿ ಇಲ್ಲಿದೆ | Karnataka Lokayukta

ರಾಜ್ಯಾದ್ಯಂತ ಇಂದಿನಿಂದ `SSLC ಪರೀಕ್ಷೆ-2’ : 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ | SSLC Exam-2

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.