ಸಸಾರಾಮ್ (ಬಿಹಾರ): ಬಿಹಾರದಲ್ಲಿ ಸರಣಿ ರೈಲು ಅಗ್ನಿ ಅವಘಡಗಳು ಮುಂದುವರಿದಿದ್ದು, ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮರುದಿನವೇ ಮತ್ತೊಂದು ರೈಲು ದುರಂತ ಸಂಭವಿಸಿದೆ. ಇಲ್ಲಿನ ಸಸಾರಾಮ್ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲಿನ ಬೋಗಿಯೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.
ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 6 ರಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಜ್ವಾಲೆಗೆ ರೈಲಿನ ಒಂದು ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ರವಿವಾರವಷ್ಟೇ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಆತಂಕ ಸೃಷ್ಟಿಸಿತ್ತು. ಆ ಘಟನೆ ಮಾಸುವ ಮುನ್ನವೇ ಸೋಮವಾರ ಮತ್ತೊಂದು ರೈಲು ಬೆಂಕಿಗಾಹತಿಯಾಗಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಅಥವಾ ಗಾಯಾಳುಗಳ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ.
#WATCH | Sasaram, Bihar: Fire broke out in a coach of the Sasaram-Patna Passenger train. Firefighters have brought the fire under control. No casualties were reported pic.twitter.com/dUpxSUkG1R
— ANI (@ANI) May 18, 2026








