Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ಅಮೆರಿಕದಿಂದ ಬಿಗ್ ರಿಲೀಫ್! ರಷ್ಯಾ ಕಚ್ಚಾ ತೈಲ ಖರೀದಿಯ ಮೇಲಿನ ನಿರ್ಬಂಧಗಳ ವಿನಾಯಿತಿ ಅವಧಿ ಮತ್ತೊಂದು ತಿಂಗಳು ವಿಸ್ತರಣೆ!

SHOCKING : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6 ವರ್ಷದ ಹೆತ್ತ ಮಗಳನ್ನೇ ನೀರಿನ ಟ್ಯಾಂಕ್‌ ಗೆ ತಳ್ಳಿ ಕೊಂದ ಪಾಪಿ ತಾಯಿ!

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ
KARNATAKA

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

By kannadanewsnow57

ಹಾಸನ: ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು. ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ವಿಸ್ತೃತವಾಗಿ ವರದಿಯನ್ನು ಒಂದು ತಿಂಗಳೊಳಗೆ ನೀಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆ.ಪಿ.ಎಂ.ಎ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಕಾಣುವ ರೀತಿಯಲ್ಲಿ ದರಪಟ್ಟಿಯನ್ನು ಹಾಕಬೇಕು. ಜೊತೆಗೆ ಕನ್ನಡ ಭಾಷೆಯಲ್ಲಿ ಹಾಕಬೇಕು, ಆರೋಗ್ಯ ವಿಮೆ, ಉಚಿತ ಆರೋಗ್ಯ ಸೇವೆಗಳು, ರಿಯಾಯಿತಿ ಮತ್ತು ವೈದ್ಯಕೀಯ ಬಿಲ್ ಮರು ಪಾವತಿ ಕುರಿತ ಮಾಹಿತಿಯನ್ನು ಕೂಡ ಫಲಕದಲ್ಲಿ ಅಳವಡಿಸಬೇಕು. ಜೊತೆಗೆ ಆರೋಗ್ಯ ಸೇವೆಗಳ ನ್ಯೂನತೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಲು ದೂರವಾಣಿ ಸಂಖ್ಯೆ ಅಳವಡಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರೊಂದಿಗೆ ಸ್ಪಂದಿಸಿ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರ ಜೊತೆಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಗೆ ಕೆ.ಪಿ.ಎಂ.ಎ ನಿಯಾಮಾವಳಿ ಬಗ್ಗೆ ಮತ್ತಿತರ ವಿಷಯಗಳ ಕುರಿತು ತಿಳಿವಳಿಕೆ ನೀಡಲು ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.

ಹೃದಯಕ್ಕೆ ಸಂಬಂಧಿಸಿದ ರೋಗಗಳಿಗೆ ಜಿಲ್ಲೆಯಲ್ಲಿ ಯಾವ ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯುತ್ತದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಂದ ಪ್ರತಿ ತಿಂಗಳು ಖಾಸಗಿ ಆಸ್ಪತ್ರೆಗಳ ಬಗ್ಗೆ ಬಂದಿರುವ ದೂರುಗಳನ್ನು ಪಟ್ಟಿ ಮಾಡಿ ಪ್ರತಿ ತಿಂಗಳು ಸಭೆ ನಡೆಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಜೀವ ರಕ್ಷಣೆಗೆ ಇರುವ ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ಗಾಯಾಳುಗಳನ್ನು ಕರೆತಂದು ಚಿಕಿತ್ಸೆ ದೊರಕಿಸಲು ನೆರವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಪ್ರಸೂತಿ ತಜ್ಞರಾದ ಡಾ.ಭಾರತಿ ರಾಜಶೇಖರ್, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

BIG NEWS: Publication of price list is mandatory in private hospitals: Important notice from the government
Share. Facebook Twitter LinkedIn WhatsApp Email

Related Posts

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

2 Mins Read

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

2 Mins Read

Petrol Pump : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು.!

2 Mins Read
Recent News

ಭಾರತಕ್ಕೆ ಅಮೆರಿಕದಿಂದ ಬಿಗ್ ರಿಲೀಫ್! ರಷ್ಯಾ ಕಚ್ಚಾ ತೈಲ ಖರೀದಿಯ ಮೇಲಿನ ನಿರ್ಬಂಧಗಳ ವಿನಾಯಿತಿ ಅವಧಿ ಮತ್ತೊಂದು ತಿಂಗಳು ವಿಸ್ತರಣೆ!

SHOCKING : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6 ವರ್ಷದ ಹೆತ್ತ ಮಗಳನ್ನೇ ನೀರಿನ ಟ್ಯಾಂಕ್‌ ಗೆ ತಳ್ಳಿ ಕೊಂದ ಪಾಪಿ ತಾಯಿ!

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

State News
KARNATAKA

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸೂಚನೆ

By kannadanewsnow57 KARNATAKA 1 Min Read

ಹಾಸನ: ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು. ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ವಿಸ್ತೃತವಾಗಿ…

ALERT : ಬೆಳಗ್ಗೆ ಎದ್ದ ತಕ್ಷಣ ಈ ಲಕ್ಷಣಗಳು ಕಾಣಿಸ್ತಿವೆಯಾ? ಹಾಗಾದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ ಎಂದರ್ಥ!

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

Petrol Pump : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.