Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿ ಖಚಿತ: ಸೆಪ್ಟೆಂಬರ್ ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ!

BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್
KARNATAKA

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

By ವಸಂತ ಬಿ ಈಶ್ವರಗೆರೆ

ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಕಂದಾಯ ಇಲಾಖೆಯ ಹಕ್ಕು ಪತ್ರಗಳನ್ನು ವಿತರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು

ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತರ ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕಾಗಿ ಈ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.

ಹಲವು ದಶಕಗಳಿಂದ ರಾಜ್ಯದ ಹಟ್ಟಿ, ತಾಂಡ, ಮಜರೆ ಗ್ರಾಮಗಳು ಕಂದಾಯ ಗ್ರಾಮಗಳಾಗದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದನ್ನು ರಾಜ್ಯ ಕಂದಾಯ ಇಲಾಖೆ ಆದ್ಯತೆ ಕಾರ್ಯಕ್ರಮವಾಗಿ ತೆಗೆದುಕೊಂಡು 14 ಲಕ್ಷಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ರಾಜ್ಯದಲ್ಲಿ ವಿತರಿಸಿದೆ. ತುಮಕೂರು ಜಿಲ್ಲೆಯೊಂದರಲ್ಲೇ 22 ಸಾವಿರ ಕಂದಾಯ ಗ್ರಾಮಗಳ ಹಕ್ಕು ಪತ್ರಗಳನ್ನು ನೀಡುವ ಮೂಲಕ ಇಂದು ಗಿನ್ನಿಸ್ ದಾಖಲೆ ಸೃಷ್ಟಿಸಲಾಗಿದೆ ಎಂದು ಹೇಳಿದರು.

ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ 650 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ನೀಡಿ ಇಂದು ಮತ್ತೊಂದು ದಾಖಲೆ ಸೃಷ್ಟಿಸಿದೆ ಎಂದರು.

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ವಿದೇಶಿ ನೇರ ಹೂಡಿಕೆಯಲ್ಲಿ ದೇಶದಲ್ಲೇ 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷದ 24 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಹರಿದುಬಂದಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ನೀಡಿದ ಪ್ರತಿಯೊಂದು ಮಾತನ್ನು ಉಳಿಸಿಕೊಂಡಿದ್ದಾರೆ ಎಂದರು.

ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಗಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಕಂದಾಯ ಇಲಾಖೆಯ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳ ವಿತರಣೆಯ ಮಾಹಿತಿಯನ್ನು ಒಳಗೊಂಡ ಬೃಹತ್ ವಸ್ತುಪ್ರದರ್ಶನವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು.

ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಿಕಿಹೊಳಿ, ಬಿ.ಝೆಡ್. ಜಮೀರ್ ಅಹಮದ್ ಖಾನ್, ಈಶ್ವರ ಖಂಡ್ರೆ, ಆರ್.ಬಿ.ತಿಮ್ಮಾಪುರ, ಕೆ.ವೆಂಕಟೇಶ್, ಶಿವಾರಾಜ್ ತಂಗಡಗಿ, ಸುರೇಶ್ ಬಿ.ಎಸ್. ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ಎಸ್.ವೈದ್ಯ, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಎನ್.ಎಸ್.ಬೋಸರಾಜು, ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಹಾಗೂ ಶಾಸಕರುಗಳು, ಸರ್ಕಾರದ ಅಪರ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ ಮುಂತಾದವರು ಉಪಸ್ಥಿತರಿದ್ದರು.

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ

2 Mins Read

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

1 Min Read

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

1 Min Read
Recent News

ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭೇಟಿ ಖಚಿತ: ಸೆಪ್ಟೆಂಬರ್ ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ!

BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

ವಿಶ್ವದ ಶಕ್ತಿಶಾಲಿ ಪಾಸ್‌ಪೋರ್ಟ್ ಪಟ್ಟಿ ಪ್ರಕಟ: ಅಗ್ರಸ್ಥಾನ ಕಾಯ್ದುಕೊಂಡ ಯುಎಇ; ಭಾರತದ ಶ್ರೇಯಾಂಕ ಎಷ್ಟು?

State News
KARNATAKA

BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಳಗಾವಿ: ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಕೊಳಚೆ ನಿರ್ಮೂಲನಾ…

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.