Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!
KARNATAKA

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

By ಸುರೇಶ್‌

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಜಾಗತಿಕ ಪರಿಣಾಮಗಳು ಈಗ ರಾಜ್ಯದ ರೈತರ ಹೊಸ್ತಿಲಿಗೆ ಬಂದು ತಲುಪಿವೆ. ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಕೊರತೆ ಎದುರಾಗಿದ್ದು, ಇದರ ನೇರ ಪರಿಣಾಮವಾಗಿ ದರಗಳು ಗಗನಕ್ಕೇರಿವೆ. ಮುಂಗಾರು ಬಿತ್ತನೆಗೆ ಸನ್ನದ್ಧರಾಗುತ್ತಿರುವ ರೈತ ಸಮುದಾಯಕ್ಕೆ ರಸಗೊಬ್ಬರದ ಅಭಾವ ಮತ್ತು ಈ ದಿಢೀರ್ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

ವಿಶೇಷವಾಗಿ ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ಬೆಲೆಯು ನಿಯಂತ್ರಣ ತಪ್ಪಿದ್ದು, ಕೇವಲ ಒಂದು ತಿಂಗಳ ಅವಧಿಯಲ್ಲಿಯೇ ಎರಡು ಬಾರಿ ದರ ಹೆಚ್ಚಳವಾಗಿದೆ. ಮೇ ತಿಂಗಳ ಆರಂಭದಲ್ಲಿ ಪ್ರತಿ 50 ಕೆ.ಜಿ. ಚೀಲಕ್ಕೆ ₹1,400 ಇದ್ದ ಕಾಂಪ್ಲೆಕ್ಸ್ ಮತ್ತು ಪೋಟ್ಯಾಷ್ ಬೆಲೆ, ಈಗಾಗಲೇ ₹1,700ಕ್ಕೆ ತಲುಪಿದೆ. ಇನ್ನು ಮಾರುಕಟ್ಟೆಗೆ ಬರುತ್ತಿರುವ ಹೊಸ ದಾಸ್ತಾನುಗಳ (ಸ್ಟಾಕ್) ಬೆಲೆ ಬರೋಬ್ಬರಿ ₹2,200ಕ್ಕೆ ಜಿಗಿದಿದೆ. ಮುಂಬರುವ ದಿನಗಳಲ್ಲಿ ಈ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಯೂರಿಯಾ ಮತ್ತು ಡಿಎಪಿ (DAP) ರಸಗೊಬ್ಬರಗಳ ಬೆಲೆಯಲ್ಲಿಯೂ ಜಾಗತಿಕವಾಗಿ ಭಾರಿ ಏರಿಕೆಯಾಗಿದೆ. ಆದರೆ, ಕೇಂದ್ರ ಸರ್ಕಾರವು ಇವುಗಳ ಮೇಲೆ ಭಾರಿ ಪ್ರಮಾಣದ ಸಬ್ಸಿಡಿಯನ್ನು ನೀಡುವ ಮೂಲಕ ಸದ್ಯಕ್ಕೆ ಬೆಲೆಯನ್ನು ನಿಯಂತ್ರಣದಲ್ಲಿಟ್ಟಿದೆ. ಆದರೆ, ಮುಕ್ತ ಮಾರುಕಟ್ಟೆಯ ಏರಿಳಿತಗಳಿಂದಾಗಿ ಸರ್ಕಾರ ಎಷ್ಟು ದಿನಗಳ ಕಾಲ ಈ ಸಬ್ಸಿಡಿ ಹೊರೆಯನ್ನು ಭರಿಸಿ ದರವನ್ನು ಕಾಯ್ದುಕೊಳ್ಳಲು ಸಾಧ್ಯ ಎಂಬ ಪ್ರಶ್ನೆಯೂ ಎದುರಾಗಿದೆ.

ಪೊಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳಿಗೂ ಸರ್ಕಾರ ಸಬ್ಸಿಡಿ ನೀಡುತ್ತದೆಯಾದರೂ, ಅದು ನಿಗದಿತ ಮಿತಿಯಲ್ಲಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗಲೆಲ್ಲ ಸಬ್ಸಿಡಿ ಪ್ರಮಾಣವನ್ನು ಹೆಚ್ಚಿಸದೇ ಇರುವುದರಿಂದ, ಇವುಗಳ ಮೇಲಿನ ನಿಯಂತ್ರಣ ಕೈತಪ್ಪಿದೆ. ವಿವಿಧ ರಸಗೊಬ್ಬರ ತಯಾರಿಕಾ ಕಂಪನಿಗಳು ಪರಿಸ್ಥಿತಿಗೆ ತಕ್ಕಂತೆ ತಮಗೆ ಇಷ್ಟಬಂದ ಹಾಗೆ ವಿಭಿನ್ನ ದರಗಳನ್ನು ನಿಗದಿಪಡಿಸುತ್ತಿರುವುದು ರೈತರ ಗೊಂದಲ ಹಾಗೂ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರಸ್ತುತ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ಬಿತ್ತನೆ ಕಾರ್ಯದಲ್ಲಿ ತೊಡಗಿರುವ ರೈತರಿಗೆ ರಸಗೊಬ್ಬರ ಅತ್ಯಗತ್ಯವಾಗಿದೆ. ಆದರೆ ಕೈಗೆಟುಕದ ದರ ಮತ್ತು ಮಾರುಕಟ್ಟೆಯಲ್ಲಿ ಉಂಟಾಗಿರುವ ಅಭಾವದಿಂದಾಗಿ ರೈತರು ತತ್ತರಿಸಿದ್ದಾರೆ. ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ಗೊಬ್ಬರಗಳಿಗೂ ಹೆಚ್ಚುವರಿ ಸಬ್ಸಿಡಿ ಪ್ರಕಟಿಸುವ ಮೂಲಕ ಮುಂಗಾರು ಬಿತ್ತನೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ ರೈತ ವಲಯದಿಂದ ಕೇಳಿಬರುತ್ತಿದೆ.

ಎಫ್‌ಐಡಿ ಕಡ್ಡಾಯ: ಯೂರಿಯಾ ಮತ್ತು

ಇತರೆ ರಸಗೊಬ್ಬರ ಕೊಳ್ಳಲು ಈಗ ಎಫ್‌ಐಡಿ (ರೈತರ ಗುರುತಿನ ಸಂಖ್ಯೆ) ಕಡ್ಡಾಯ. ಎಫ್‌ಐಡಿ ಹೊಂದಿದ ರೈತರಿಗೆ, ‘ಕೆ ಕಿಸಾನ್’ ಆ್ಯಪ್ ಮೂಲಕ ನೋಂದಣಿ ಮಾಡಿ, ಎಕರೆಗೆ ಕೇವಲ 1 ಚೀಲ ಮಾತ್ರ ನೀಡಲಾಗುತ್ತದೆ. ಇದಕ್ಕಿಂತ ಹೆಚ್ಚಿಗೆ ಖರೀದಿ ಮಾಡಲು ಸಾಧ್ಯವಿಲ್ಲ. ಎಫ್‌ಐಡಿಯಲ್ಲಿ ನೋಂದಣಿ ಮಾಡಿಯೇ ಕೊಡಬೇಕಾಗಿದ್ದರಿಂದ ಎಲ್ಲಿಯೇ ಖರೀದಿ ಮಾಡಿದರೂ ಅದು ಎಕರೆಗೆ ಒಂದು ಚೀಲ ಖರೀದಿಯಾಗುತ್ತಿದ್ದಂತೆ ಲಾಕ್ ಆಗುತ್ತದೆ. ಇನ್ನು, 20 ಎಕರೆಗಿಂತಲೂ ಹೆಚ್ಚು ಭೂಮಿ ಇದ್ದ ರೈತರು, ಬೆಳೆ ದೃಢೀಕರಣ ಪ್ರಮಾಣ ಪತ್ರ ನೀಡಿ, ಹೆಚ್ಚುವರಿಯಾಗಿ ಯೂರಿಯಾ ರಸಗೊಬ್ಬರ ಪಡೆಯಬಹುದಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

2 Mins Read

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

1 Min Read

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read
Recent News

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

State News
KARNATAKA

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

By ಸುರೇಶ್‌ KARNATAKA 2 Mins Read

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮೂಡಿದ್ದ ಆತಂಕಕ್ಕೆ ಹೈಕೋರ್ಟ್ ಮಹತ್ವದ…

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.