Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ
KARNATAKA

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

By ಸುರೇಶ್‌

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮೂಡಿದ್ದ ಆತಂಕಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಒಂದನೇ ತರಗತಿ ಪ್ರವೇಶಾತಿಯ ವಯೋಮಿತಿ ಸಡಿಲಿಕೆ ಆದೇಶವನ್ನು ಮರು ಪರಿಶೀಲಿಸಿ, ಒಂದು ವಾರದೊಳಗೆ ಸೂಕ್ತವಾದ ಹೊಸ ಆದೇಶ ಹೊರಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಕಡಕ್ ಸೂಚನೆ ನೀಡಿದೆ.

ಬೆಂಗಳೂರಿನ ಮಾಸ್ಟರ್ ಕೃಷ್ಣಗಣೇಶ್ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪೋಷಕರ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ನಡೆಸಿತು. ಸದ್ಯ ಜಾರಿಯಲ್ಲಿರುವ ವಯೋಮಿತಿ ನಿಯಮದಿಂದಾಗಿ ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಗೊಂದಲ ಹಾಗೂ ತೊಂದರೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಆಯಾಮಗಳಲ್ಲೂ ಈ ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಪ್ರಮುಖ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿರುವ ಆದೇಶದ ಪ್ರಕಾರ ಒಂದನೇ ತರಗತಿ ದಾಖಲಾತಿಗೆ ಮಗುವಿಗೆ 6 ವರ್ಷ ತುಂಬಿರಬೇಕು. ಆದರೆ, ಪ್ರಸ್ತುತ ಅರ್ಜಿದಾರರಾದ ಮಕ್ಕಳಿಗೆ ಇನ್ನೂ 6 ವರ್ಷ ಪೂರ್ಣಗೊಂಡಿಲ್ಲ. ಆದಾಗ್ಯೂ, ಅವರು ಈಗಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (ಯುಕೆಜಿ) ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸರ್ಕಾರದ ಈ ಕಠಿಣ ನಿಯಮದಿಂದಾಗಿ ರಾಜ್ಯದ ಸುಮಾರು 5 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದ್ದು, ಅವರು ಅನಿವಾರ್ಯವಾಗಿ ಮತ್ತೊಮ್ಮೆ ಯುಕೆಜಿ ತರಗತಿಯಲ್ಲೇ ಓದಬೇಕಾದ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾದಿಸಿದರು.

ಈ ಹಿಂದೆ ಶಾಲಾ ಪ್ರವೇಶಕ್ಕೆ ಕನಿಷ್ಠ 6 ವರ್ಷ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನು ತದನಂತರ 5 ವರ್ಷ 8 ತಿಂಗಳಿಗೆ ಸಡಿಲಿಸಿ ಇಳಿಸಲಾಗಿತ್ತು. ಆದರೆ, ಈಗಿರುವ ಪ್ರಾಯೋಗಿಕ ಸಮಸ್ಯೆಗಳನ್ನು ನಿವಾರಿಸಲು ಮತ್ತು ಮಕ್ಕಳ ಶೈಕ್ಷಣಿಕ ವರ್ಷ ವ್ಯರ್ಥವಾಗುವುದನ್ನು ತಪ್ಪಿಸಲು ಈ ವಯೋಮಿತಿಯನ್ನು 5 ವರ್ಷ 4 ತಿಂಗಳಿಗೆ ಇಳಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಅರ್ಜಿದಾರರ ವಾದ ಆಲಿಸಿದ ನಂತರ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಸೂಕ್ತ ಸಮಯ ನೀಡಿದಲ್ಲಿ ಅರ್ಜಿದಾರರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಹಾಗೂ ವಯೋಮಿತಿ ಸಡಿಲಿಕೆಗೆ ಸಂಬಂಧಿಸಿದಂತೆ ಅಗತ್ಯವಿರುವ ಸೂಕ್ತ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗುವುದು ಎಂದು ಭರವಸೆ ನೀಡಿದರು. ಸರ್ಕಾರದ ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠವು, ವಾರದೊಳಗೆ ಅಂತಿಮ ನಿರ್ಧಾರ ಪ್ರಕಟಿಸಲು ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

2 Mins Read

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

2 Mins Read

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

1 Min Read
Recent News

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

State News
KARNATAKA

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

By ವಸಂತ ಬಿ ಈಶ್ವರಗೆರೆ KARNATAKA 2 Mins Read

“ಒಂದೇ ಒಂದು #ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ? ಶಾಸ್ತ್ರಗಳು ಏನು ಹೇಳುತ್ತವೆ ಮುಂದೆ ಓದಿ! “ಅಶ್ವತ್ಥ ವೃಕ್ಷದ…

BIG NEWS : 1ನೇ ತರಗತಿ ಪ್ರವೇಶ ವಯಸ್ಸು ಸಡಿಲಿಕೆ ಪರಿಶೀಲಿಸಿ : ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ

BREAKING : ಪೆಟ್ರೋಲ್, ಡಿಸೇಲ್, ಗ್ಯಾಸ್ ಆಯ್ತು ಈಗ ರಸಗೊಬ್ಬರ ದರವು ಏರಿಕೆ : ರಾಜ್ಯದ ರೈತರು ಕಂಗಾಲು!

BREAKING : ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.