Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೋದಿ ‘ರಿಪೋರ್ಟ್ ಕಾರ್ಡ್’ ಸಭೆ: ಕೇಂದ್ರ ಸಚಿವ ಸಂಪುಟ ಪುನಾರಚನೆ ಕೌಂಟ್‌ಡೌನ್? ಇಂದು ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್!

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕಿಂಗ್ ಕೊಹ್ಲಿ ಟೆಸ್ಟ್ ರಿಟೈರ್ಮೆಂಟ್ ವಾಪಸ್?:’ಭಾರತ ತಂಡಕ್ಕಾಗಿ ಮತ್ತೆ ಬಿಳಿ ಜರ್ಸಿ ತೊಡಲಿದ್ದಾರಾ ವಿರಾಟ್?’: ಬಾಲ್ಯದ ಕೋಚ್ ಬಿಚ್ಚಿಟ್ಟ ಸ್ಫೋಟಕ ಸತ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ
KARNATAKA

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

By ಸುರೇಶ್‌

ರಾಯಚೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಈಗಾಗಲೇ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಹೈಕಮಾಂಡ್‌ ಸಹಮತ ವ್ಯಕ್ತಪಡಿಸಿದೆ ಎಂದು ಸ್ಪಷ್ಟಪಡಿಸಿದರು.

ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸ್ಥಳೀಯ ಹಿರಿಯ ನಾಯಕರಿಗೆ ಆದ್ಯತೆ ಸಿಗುವ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಮಗೆ ಪಿತೃಸಮಾನರಾದ ಹಿರಿಯ ನಾಯಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ಲಭಿಸಬೇಕು ಎನ್ನುವ ಆಸೆ ತಮಗೂ ಇದೆ ಎಂದು ತಮ್ಮ ಮನದ ಇಂಗಿತವನ್ನು ಹೊರಹಾಕಿದರು. ಜಿಲ್ಲೆಯ ಹಿರಿಯ ನಾಯಕರ ಪರವಾಗಿ ಅವರು ಬ್ಯಾಟಿಂಗ್‌ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದಲ್ಲಿ ಸದಾ ಚರ್ಚೆಯಲ್ಲಿರುವ ಮುಖ್ಯಮಂತ್ರಿ ಬದಲಾವಣೆ ವಿಷಯದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸ್ಥಾನದ ಬದಲಾವಣೆ ಅಥವಾ ಯಾವುದೇ ಪ್ರಮುಖ ನಿರ್ಧಾರಗಳಿಗೆ ಸಂಬಂಧಿಸಿದಂತೆ ಅವರು ಹೈಕಮಾಂಡ್ ತೀರ್ಮಾನಕ್ಕೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲಾಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಿರೂಪಾಕ್ಷಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಉತ್ತಮ ವೈಯಕ್ತಿಕ ಹಾಗೂ ರಾಜಕೀಯ ಬಾಂಧವ್ಯವನ್ನು ಹೊಂದಿದ್ದಾರೆ. ಪಕ್ಷದ ತತ್ವ ಹಾಗೂ ಸಿದ್ಧಾಂತಗಳನ್ನು ಒಪ್ಪಿ ಯಾರೇ ಬಂದರೂ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸದಾ ಸ್ವಾಗತವಿರುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಭೀಕರ ಅಪಘಾತ : ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!

1 Min Read

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ : ದೀಲಿಪ್ ರಾಜ್ ಬೆನ್ನಲ್ಲೆ, ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ!

1 Min Read

ವಿಜಯಪುರದಲ್ಲಿ ಮಳೆಯಿಂದ ನೆನೆದಿದ್ದ ಮನೆಯ ಮೇಲ್ಚಾವಣಿ ಕುಸಿದು, ಮಹಿಳೆ ಸಾವು!

1 Min Read
Recent News

ಮೋದಿ ‘ರಿಪೋರ್ಟ್ ಕಾರ್ಡ್’ ಸಭೆ: ಕೇಂದ್ರ ಸಚಿವ ಸಂಪುಟ ಪುನಾರಚನೆ ಕೌಂಟ್‌ಡೌನ್? ಇಂದು ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಮೀಟಿಂಗ್!

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕಿಂಗ್ ಕೊಹ್ಲಿ ಟೆಸ್ಟ್ ರಿಟೈರ್ಮೆಂಟ್ ವಾಪಸ್?:’ಭಾರತ ತಂಡಕ್ಕಾಗಿ ಮತ್ತೆ ಬಿಳಿ ಜರ್ಸಿ ತೊಡಲಿದ್ದಾರಾ ವಿರಾಟ್?’: ಬಾಲ್ಯದ ಕೋಚ್ ಬಿಚ್ಚಿಟ್ಟ ಸ್ಫೋಟಕ ಸತ್ಯ!

BREAKING: ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಭೀಕರ ಎಸಿ ಸ್ಫೋಟ: ಭುಗಿಲೆದ್ದ ಬೆಂಕಿಗೆ ವೃದ್ಧೆ ಬಲಿ, 16 ಮಂದಿಗೆ ಗಂಭೀರ ಗಾಯ!

State News
KARNATAKA

BREAKING : ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಶೀಘ್ರ ಸಂಪುಟ ವಿಸ್ತರಣೆ : ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

By ಸುರೇಶ್‌ KARNATAKA 1 Min Read

ರಾಯಚೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು…

BREAKING : ಹಾಸನದಲ್ಲಿ ಭೀಕರ ಅಪಘಾತ : ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ : ದೀಲಿಪ್ ರಾಜ್ ಬೆನ್ನಲ್ಲೆ, ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ!

ವಿಜಯಪುರದಲ್ಲಿ ಮಳೆಯಿಂದ ನೆನೆದಿದ್ದ ಮನೆಯ ಮೇಲ್ಚಾವಣಿ ಕುಸಿದು, ಮಹಿಳೆ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.