ಶಿವಮೊಗ್ಗ : ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಪ್ರತಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎ ಟಿ ಎಸ್ ಐಡಿ(SATS ID) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಾಗಿದ್ದಲ್ಲಿ ಎಸ್ ಎಸ್ ಪಿ ಐಡಿ ಮತ್ತು ಯೂನಿವರ್ಸಿಟಿ ರಿಜಿಸ್ಟ್ರೇಷನ್ ನಂಬರ್ ನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಈ ಪ್ರವೇಶಾತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸಾಗರ ತಾಲೂಕು ಇವರನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ: 9480843192 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








