ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ನ ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ಪ್ರವೇಶ ಕಲ್ಪಿಸುವ ಡಿಸಿಇಟಿ ಹಾಗೂ ಎಂ.ಟೆಕ್/ಎಂಇ ಪ್ರವೇಶ ಪರೀಕ್ಷೆಗಳು ಮೇ 23ರಂದು ನಡೆಯಲಿದ್ದು ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಎರಡೂ ಪರೀಕ್ಷೆಗಳು ಅಂದು ಬೆಂಗಳೂರು, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕಲ್ಬುರ್ಗಿ, ಮೈಸೂರು ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ.
ಡಿಸಿಇಟಿ ಪರೀಕ್ಷೆಯನ್ನು 51 ಕೇಂದ್ರಗಳಲ್ಲಿ ಒಟ್ಟು 21,095 ಹಾಗೂ ಎಂ.ಟೆಕ್ ಪರೀಕ್ಷೆಯನ್ನು 26 ಕೇಂದ್ರಗಳಲ್ಲಿ ಒಟ್ಟು 12,116 ಅಭ್ಯರ್ಥಿಗಳು ಬರೆಯುತ್ತಿದ್ದಾರೆ. ಈ ಎರಡೂ ಕೋರ್ಸ್ ಗಳಿಂದ ಒಟ್ಟು 34,211 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.. ಇದಲ್ಲದೆ ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ಕೂಡ ಬೆಂಗಳೂರಿನಲ್ಲಿ ಅಂದು ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.








