Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

ಪೋಷಕರೇ ಎಚ್ಚರ! ಬಾಲ್ಯದಲ್ಲಿ ತಿನ್ನುವ ‘ಜಂಕ್ ಫುಡ್’ ಮಕ್ಕಳ ಮೆದುಳಿನ ರಚನೆಯನ್ನೇ ಬದಲಾಯಿಸಬಹುದು; ಶಾಕಿಂಗ್ ಸತ್ಯ ಬಿಚ್ಚಿಟ್ಟ ಹೊಸ ಸಂಶೋಧನೆ!

BIG NEWS : ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ : ಸೌಜನ್ಯ ಕೇಸ್ ಮರು ತನಿಖೆಗೆ ‘CBI’ ಗೆ ಹಸ್ತಾಂತರ ಸಾಧ್ಯತೆ!
KARNATAKA

BREAKING : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ : ಸೌಜನ್ಯ ಕೇಸ್ ಮರು ತನಿಖೆಗೆ ‘CBI’ ಗೆ ಹಸ್ತಾಂತರ ಸಾಧ್ಯತೆ!

By ಸುರೇಶ್‌

ಬೆಂಗಳೂರು : ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚಿತವಾಗಿರುವ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾ೧ಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಸಂಬಂಧ ಕೇಂದ್ರ ತನಿಖಾ ವಿಭಾಗ (ಸಿಬಿಐ) ಅಥವಾ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಸಂಬಂಧ ರಾಜ್ಯ ಗೃಹ ಹಾಗೂ ಕಾನೂನು ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸರ್ಕಾರ ಸಮಾಲೋಚನೆ ನಡೆಸಿದೆ. ಪ್ರಕರಣದ ವಿಚಾರಣೆ ಮುಂದಿನ ವಾರ ಮತ್ತೆ ಸುಪ್ರೀಂ ಕೋರ್ಟ್‌ ಮುಂದೆ ಬರಲಿದ್ದು, ಅಷ್ಟರಲ್ಲಿ ಕೋರ್ಟ್‌ಗೆ ತನ್ನ ನಿಲುವು ಏನೆಂದು ಸರ್ಕಾರ ಸ್ಪಷ್ಟಪಡಿಸಲಿದೆ ಎಂದು ಗೃಹ ಇಲಾಖೆ ತಿಳಿಸಿದೆ.

ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪು ಬಳಿಕ ಮಗಳ ಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೃತ ಸೌಜನ್ಯ ತಾಯಿ ಕುಸುಮಾವತಿ ಗೌಡ ಮೊರೆ ಹೋಗಿದ್ದರು. ಇನ್ನೊಂದೆಡೆ ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಕೆಳಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮತ್ತೊಂದು ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌, ಪ್ರಕರಣದ ಮರು ತನಿಖೆ ವಿಚಾರವಾಗಿ ಮುಂದಿನ ಕ್ರಮದ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ತನ್ನ ಅಭಿಪ್ರಾಯ ತಿಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. 2012ರಲ್ಲಿ ಧರ್ಮಸ್ಥಳ ಸಮೀಪದ ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಮಾನುಷವಾಗಿ ಅತ್ಯಾ೧ಚಾರ ಎಸಗಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಆರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಅಂದಿನ ರಾಜ್ಯ ಸರ್ಕಾರ, ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಆಗ ಕಾರ್ಕಳ ತಾಲೂಕಿನ ಕುಂದೂರು ಗ್ರಾಮದ ಸಂತೋಷ್‌ ರಾವ್‌ನನ್ನು ಸಿಐಡಿ ಬಂಧಿಸಿತ್ತು. 2013ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ವಿದ್ಯಾರ್ಥಿನಿ ಹತ್ಯೆಯನ್ನು ಸಿಬಿಐಗೆ ವಹಿಸಿತ್ತು. ಅಂತೆಯೇ ತನಿಖೆ ನಡೆಸಿದ ಸಿಬಿಐ, ಸಂತೋಷ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಕೊನೆಗೆ ಆತನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿತ್ತು. ಈ ತೀರ್ಪು ಹೊರಬಿದ್ದ ಬಳಿಕ ಸೌಜನ್ಯ ಹತ್ಯೆ ಬಗ್ಗೆ ಮರು ತನಿಖೆಗೆ ಸಾರ್ವಜನಿಕ ವಲಯದಲ್ಲಿ ಪ್ರಬಲ ದನಿ ಕೇಳಿ ಬಂತು.

ಸೌಜನ್ಯ ಕೊಲೆ ಪ್ರಕರಣದ ತನಿಖೆ ಬಗ್ಗೆ ಲೋಪವಾಗಿದೆ ಎಂದು ಸ್ಥಳೀಯ ಪೊಲೀಸರ ಮೇಲೆ ಆರೋಪ ಬಂದಿತ್ತು. ನಂತರ ಸಿಐಡಿ ಸಹ ತನಿಖೆ ನಡೆಸಿತು. ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಬಳಿಕ ಪ್ರಕರಣದ ಕಡತಗಳನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮರು ತನಿಖೆಗೆ ಸಿಐಡಿಗೆ ತಾಂತ್ರಿಕ ಸಮಸ್ಯೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮರು ತನಿಖೆ ವಿಚಾರವಾಗಿ ಕೇಂದ್ರ ಸರ್ಕಾರ ಅಥವಾ ಸಿಬಿಐ ನಿರ್ಧರಿಸಲಿದೆ ಎಂದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

2 Mins Read

BIG NEWS : ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರ

2 Mins Read

BREAKING : ಬೆಳಗಾವಿಯಲ್ಲಿ ಘೋರ ದುರಂತ : ಗುಂಡು ಹಾರಿಸಿಕೊಂಡು ಹಿರಿಯ ವೈದ್ಯ ಆತ್ಮಹತ್ಯೆಗೆ ಶರಣು!

1 Min Read
Recent News

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

ಪೋಷಕರೇ ಎಚ್ಚರ! ಬಾಲ್ಯದಲ್ಲಿ ತಿನ್ನುವ ‘ಜಂಕ್ ಫುಡ್’ ಮಕ್ಕಳ ಮೆದುಳಿನ ರಚನೆಯನ್ನೇ ಬದಲಾಯಿಸಬಹುದು; ಶಾಕಿಂಗ್ ಸತ್ಯ ಬಿಚ್ಚಿಟ್ಟ ಹೊಸ ಸಂಶೋಧನೆ!

BIG NEWS : ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರ

BREAKING : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ : ಸೌಜನ್ಯ ಕೇಸ್ ಮರು ತನಿಖೆಗೆ ‘CBI’ ಗೆ ಹಸ್ತಾಂತರ ಸಾಧ್ಯತೆ!

State News
KARNATAKA

BIG NEWS : ರಾಜ್ಯದಲ್ಲಿ ಮೇ 29 ರಿಂದ ಶೈಕ್ಷಣಿಕ ವರ್ಷ ಆರಂಭ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೇತುಬಂಧ’ ಕಡ್ಡಾಯ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಮೇ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿವೆ.…

BIG NEWS : ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ರಾಜ್ಯ ಸರ್ಕಾರ

BREAKING : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ : ಸೌಜನ್ಯ ಕೇಸ್ ಮರು ತನಿಖೆಗೆ ‘CBI’ ಗೆ ಹಸ್ತಾಂತರ ಸಾಧ್ಯತೆ!

BREAKING : ಬೆಳಗಾವಿಯಲ್ಲಿ ಘೋರ ದುರಂತ : ಗುಂಡು ಹಾರಿಸಿಕೊಂಡು ಹಿರಿಯ ವೈದ್ಯ ಆತ್ಮಹತ್ಯೆಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.