ಬೆಂಗಳೂರು: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ದೃಢೀಕರಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಅಟಲ್ ಜೀ ಜನಸ್ನೇಹಿ ಕೇಂದ್ರ (ನಾಡಕಚೇರಿ) ಪ್ರಮುಖ ಪಾತ್ರ ವಹಿಸುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾಡಕಚೇರಿಯಲ್ಲಿ ದೊರೆಯುವ ಒಟ್ಟು 44 ಪ್ರಮುಖ ಸೇವೆಗಳು, ಅವುಗಳ ಅರ್ಜಿ ಶುಲ್ಕ ಮತ್ತು ಸೇವೆ ದೊರೆಯುವ ಕಾಲಾವಧಿಯ (ಸಕಾಲ ಅವಧಿ – ದಿನಗಳಲ್ಲಿ) ಅಧಿಕೃತ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
ಈ ಪಟ್ಟಿಯಲ್ಲಿ ಜಾತಿ, ಆದಾಯ ಪ್ರಮಾಣ ಪತ್ರಗಳಿಂದ ಹಿಡಿದು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಗಳವರೆಗಿನ ವಿವರಗಳಿವೆ.









