Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ
KARNATAKA

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು ; ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ-ಸಂವಾದ”ದಲ್ಲಿ ಮಾತನಾಡಿದರು.

ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.

ಸಿಎಂ ಯಾವತ್ತೂ ಹೇಳಿಲ್ಲ

ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, ” ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು” ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.

ಕಠಿಣ ಷರತ್ತುಗಳು ವಾಪಸ್ಸು:

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಾರದಲ್ಲಿ ಆದೇಶ ಹೊರಡಿಸಲಾಗುವುದು. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.

ಪತ್ರಕರ್ತರ ಸಂಘ ಮತ್ತು ಪತ್ರಕರ್ತ ಸಮುದಾಯ ಅವರ ಒತ್ತಡದಿಂದಲೇ ರಾಜ್ಯದಲ್ಲಿ ‘ಜಾಹಿರಾತು ನೀತಿ’ ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹಿರಾತು ನೀತಿಯ ಹಿಂದಿದೆ. ಜಾಹಿರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.

ಜಾಹಿರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ

ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.

ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದರು.

ಮೂವರಿಗೆ ಅರ್ಪಿಸಿದ ಕೆವಿಪಿ

ತಮಗೆ ಸಿಗುವ ಸಾರ್ವಜನಿಕ ಸನ್ಮಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಲಾರದ ಪತ್ರಕರ್ತರು ಮತ್ತು ರಾಜ್ಯದ ಪತ್ರಕರ್ತ ಸಮುದಾಯಕ್ಕೆ ಅರ್ಪಿಸಿದ ಕೆ.ವಿ.ಪ್ರಭಾಕರ್ ಅವರು, ಇದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಓದಿದ ಶಾಲೆಗೆ ನೆರವಾಗಿದ್ದು ಸಮಾಧಾನ ತಂದಿದೆ

ಪತ್ರಕರ್ತ ಸಮುದಾಯಕ್ಕೆ, ಪತ್ರಿಕಾ ವಿತರಕ ಸಮುದಾಯಕ್ಕೆ ನೆರವಾಗುವ ಜೊತೆಗೆ ನೂರಾರು ರೀತಿಯ ನೆರವು ಸರ್ಕಾರದಿಂದ ಒದಗಿಸಲಾಗಿದೆ. ಇವುಗಳ ಆಚೆಗೆ ನಾನು ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಲು ಸಾಧ್ಯವಾಗಿದ್ದು, ಈ ಸರ್ಕಾರಿ ಶಾಲೆಗೆ ಮರುಜೀವ ಬಂದು ವಿದ್ಯಾರ್ಥಿಗಳ ಸಂಖ್ಯೆ 100ರ ಗಡಿ ದಾಟಿರುವುದು ಸಮಾಧಾನ ತಂದಿದೆ ಎಂದರು.

ಪರಿಣಾಮಕಾರಿ ಕೆಲಸ:

KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಪ್ರಭಾಕರ್ ಅವರು ಸರ್ಕಾರ ಮತ್ತು ಸಂಘಟನೆ ನಡುವೆ ಸೇತುವೆ ರೀತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನಂ ಮಾತನಾಡಿ, ಪ್ರಭಾಕರ್ ಅಧಿಕಾರ ಸ್ವೀಕಾರ ಮಾಡಿ ಮೂರು ವರ್ಷ ತುಂಬಿದ ಸಂದರ್ಭದ ಕಾರ್ಯಕ್ರಮವನ್ನು ಕೆಯುಡಬ್ಲ್ಯೂಜೆ ಅಚ್ಚುಕಟ್ಟಾಗಿ ಸಂಘಟಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಭಾಕರ್ ಇನ್ನೂ ಉನ್ನತ ಹುದ್ದೆ ಅಲಂಕರಿಸಲಿ ಎಂದು ಶುಭ ಹಾರೈಸಿದರು.

ರಾಜ್ಯ ಪದಾಧಿಕಾರಿಗಳಾದ ಜಿ.ಸಿ.ಲೋಕೇಶ, ಸೋಮಶೇಖರ್ ಕೆರಗೋಡು, ವಾಸುದೇವ ಹೊಳ್ಳ, ಎನ್.ರವಿಕುಮಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

2 Mins Read

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

1 Min Read

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ, ಬೇಸೂರು ಅಣುಸ್ಥಾವರ ವಿರೋಧಿಸಿ ಸರ್ವಾನುಮತದ ನಿರ್ಣಯ: ಸಚಿವ ಮಧು ಬಂಗಾರಪ್ಪ

5 Mins Read
Recent News

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ, ಬೇಸೂರು ಅಣುಸ್ಥಾವರ ವಿರೋಧಿಸಿ ಸರ್ವಾನುಮತದ ನಿರ್ಣಯ: ಸಚಿವ ಮಧು ಬಂಗಾರಪ್ಪ

State News
KARNATAKA

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಜಾಗತಿಕ ಮಟ್ಟದ ಪ್ರಸಿದ್ಧ ಔಷಧ ತಯಾರಿಕಾ ಕಂಪನಿ ‘ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ʼ ಭಾರತದಲ್ಲಿ ಟೈಪ್ 2 ಮಧುಮೇಹ ಹೊಂದಿರುವ…

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ, ಬೇಸೂರು ಅಣುಸ್ಥಾವರ ವಿರೋಧಿಸಿ ಸರ್ವಾನುಮತದ ನಿರ್ಣಯ: ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.