Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದರು. ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ ಪ್ರಕರಣ ಪತ್ತೆಯಾಗಿಲ್ಲ, ಅಕ್ಕ ಪಕ್ಕದ ದೇಶಗಳಲ್ಲಿಯೂ ಎಬೋಲಾ ಪ್ರಕರಣ ದಾಖಲಾಗಿಲ್ಲ. ಆದರೂ ಕೂಡ ನಾವು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಂದು ಮಾಧ್ಯಮದೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಫ್ರಿಕನ್ ದೇಶಗಳಾದ ಉಗಾಂಡಾ, ಕಾಂಗೋ ಮುಂತಾದ ದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು. ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ವಿನಂತಿಸುತ್ತೇನೆ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದೆ. ಕೇಂದ್ರ ಸರ್ಕಾರವೂ ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದರು.

ಪೆಟ್ರೋಲ್ ದರ ಏರಿಕೆ ಕುರಿತು

ಕೆಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ಸಮಸ್ಯೆಗೆ ಸಿಲುಕಲಿದೆ. ದೇಶದ ಜನರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಆರು ತಿಂಗಳ ಹಿಂದೆಯೇ ಹೇಳಿದ್ದರು. ಅನವಶ್ಯಕವಾಗಿ ನಡೆಯುತ್ತಿರುವ ಯುದ್ಧದಿಂದ ಈ ಪರಿಸ್ಥಿತಿ ಬಂದಿದೆ ಎನ್ನುವುದನ್ನು ಒಪ್ಪಿಕೊಳ್ಳೋಣ. ಕೇಂದ್ರ ಸರ್ಕಾರ ಮೊದಲಿನಿಂದಲೂ ಸರಿಯಾಗಿ ನಡೆದುಕೊಂಡಿಲ್ಲ. ಭಾರತದ ನಿಲುವು ಏನು ಎನ್ನುವುದನ್ನು ಹೇಳಿಲ್ಲ. ಪ್ರವಾಸ ಮಾಡಬೇಡಿ, ಚಿನ್ನ ಖರೀದಿಸಬೇಡಿ ಇಂತಹ ಹೇಳಿಕೆ ನೀಡುತ್ತ ಮೊದಿಯವರುಕಾಲ ಕಳೆಯುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಸೋತಿದ್ದಾರೆ. ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ, ಬ್ಯಾರಲ್ ಗೆ 120 ಡಾಲರ್ ವರೆಗೂ ಹೋಗಿತ್ತು. ಆದರೆ ಜನರಿಗೆ ತೊಂದರೆ ಆಗದಂತೆ ಅವರು ಕ್ರಮ ಕೈಗೊಂಡಿದ್ದರು. ಆದರೆ ಈಗ ಎನಾಗಿದೆ ನೋಡಿ ಎಂದರು.

ಈವರೆಗೆ ಕಡಿಮೆ ದರ ಇದ್ದಾಗಲೂ ಕೇಂದ್ರ ಸರ್ಕಾರ ಪೆಟ್ರೋಲ್ ದರ ಇಳಿಸಿರಲಿಲ್ಲ. ಬೇಕಾದಷ್ಟು ಲಾಭ ಮಾಡಿಕೊಂಡಿತ್ತು. ಈಗ ಯುದ್ಧದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆ ಆದಾಗ ಟಾಕ್ಸ್ ದರ ಇಳಿಸಿ ಜನರಿಗೆ ಅನುಕೂಲ ಮಾಡುವ ಬದಲು ತೈಲದರ ಏರಿಕೆಯನ್ನು ನಿರಂತರವಾಗಿ ಮಾಡುತ್ತಿದೆ. ಜನಸಾಮಾನ್ಯರ ಬದುಕನ್ನೇ ತೊಂದರೆಗೆ ಸಿಲುಕಿಸಿದೆ. ಮೋದಿಯವರಿಗೆ ಚುನಾವಣೆ ಗೆಲ್ಲುವುದು ಮಾತ್ರ ಪ್ರಾಮುಖ್ಯ. ಜನರ ಕಷ್ಟ ಬೇಕಾಗಿಲ್ಲ. ಸಮಾಜವನ್ನು ವಿಭಜಿಸಿ, ಶಾಂತಿ, ಸಹಬಾಳ್ವೆಯನ್ನು ಹಾಳುಮಾಡಿ, ಇಸ್ಟಾಗ್ರಾಂ ನಲ್ಲಿ ಫೋಟೋ, ವಿಡಿಯೋ ಹಾಕುತ್ತ ಕಾಲ ಕಳೆಯುತ್ತಿದ್ದಾರೆ. ಸಾರ್ವಜನಿಕರು ತೊಂದರೆಯಲ್ಲಿ ಬೇಯುತ್ತಿದ್ದಾರೆ ಎಂದು ಗುಡುಗಿದರು.

ನೀಟ್ ಪರೀಕ್ಷೆ ಕುರಿತು

ಕೇಂದ್ರ ಅನುಮತಿ ನೀಡಿದರೆ ರಾಜ್ಯಮಟ್ಟದಲ್ಲಿ ನಾವು ನೀಟ್ ಪರೀಕ್ಷೆ ನಡೆಸಲು ಸಿದ್ಧ. ಪ್ರತಿ ವರ್ಷವೂ ಕೇಂದ್ರ ಸರಕಾರ ನೀಟ್ ಪರೀಕ್ಷೆಯಲ್ಲಿ ಒಂದಲ್ಲ ಒಂದು ಎಡವಟ್ಟು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ದೂಡಿದೆ. ಜವಾಬ್ದಾರಿಯುತವಾಗಿ ಪರೀಕ್ಷೆ ನಡೆಸದೆ, ಹೊಣೆಗಾರಿಕೆಯಿಲ್ಲದಂತೆ ವ್ಯವಹರಿಸುತ್ತಿದೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಪೋಷಕರ ಗೋಳು ಕೇಳುವವರು ಯಾರು? ಜನಸಾಮಾನ್ಯರ ಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವೇ ಆಗುತ್ತಿಲ್ಲ. ನಾವು ಪ್ರಾರಂಭಿಸಿದ ಸಿಇಟಿ ಮಾದರಿಯಾಗಿ ನಡೆಯುತ್ತಿದೆ. ಹಾಗಾಗಿ ನೀಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ನಾವು ಸಿದ್ಧರಿದ್ದೇವೆ ಎಂದರು.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

3 Mins Read

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

2 Mins Read

BIG NEWS : ಕರ್ನಾಟಕದ ಮಾಜಿ ಶಾಸಕರಿಗೆ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

3 Mins Read
Recent News

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

BIG NEWS : ಕರ್ನಾಟಕದ ಮಾಜಿ ಶಾಸಕರಿಗೆ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

BREAKING: ರಾಜ್ಯದ ‘ಕಾರ್ಮಿಕ’ರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ ಪರಿಷ್ಕರಿಸಿ’ ಸರ್ಕಾರ ಅಧಿಕೃತ ಆದೇಶ | Minimum Wages

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯದ ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಧಿಕೃತ…

ರಾಜ್ಯದಲ್ಲಿ ಎಬೋಲಾ ಕುರಿತು ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಮನೆಯಲ್ಲಿ ಕರೆಂಟ್ ಬಿಲ್ ಜಾಸ್ತಿ ಬರ್ತಿದ್ಯಾ..? ಈ 6 ಕೆಲಸ ಮಾಡಿದ್ರೆ ನಿಮ್ಮ ಹಣ ಉಳಿಯೋದು ಗ್ಯಾರಂಟಿ!

BIG NEWS : ಕರ್ನಾಟಕದ ಮಾಜಿ ಶಾಸಕರಿಗೆ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.