ಬೆಂಗಳೂರು: ರಾಜ್ಯದ ಜನತೆಯ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಸಾರ್ಥಕ ಸಂದರ್ಭದಲ್ಲಿ, ಸರ್ಕಾರವು ತನ್ನ ಎಲ್ಲಾ ಸಾಧನೆಗಳ ಶ್ರೇಯಸ್ಸನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿಯೊಂದು ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ‘ನುಡಿದಂತೆ ನಡೆದ’ ಹೆಮ್ಮೆ ಸರ್ಕಾರದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಶಕ್ತ, ಸಮೃದ್ಧ ಮತ್ತು ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಸರ್ಕಾರವು ಬಹಳಷ್ಟು ದೂರ ಕ್ರಮಿಸಿದ್ದು, ಈ ಅಭಿವೃದ್ಧಿ ಪ್ರಯತ್ನಗಳು ಮುಂದೆ ಇನ್ನಷ್ಟು ಶೀಘ್ರವಾಗಿ ಮತ್ತು ಪರಿಣಾಮಕಾರಿಯಾಗಿ ಸಾಗಲಿವೆ ಎಂದು ಸರ್ಕಾರ ಭರವಸೆ ನೀಡಿದೆ.
ಕಳೆದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಸಬಲೀಕರಣ ಹಾಗೂ ಸಕ್ಕರೆ ಕಾರ್ಖಾನೆಗಳ ಮೂಲಸೌಕರ್ಯ ವೃದ್ಧಿಗಾಗಿ ಕೈಗೊಂಡಿರುವ ಪ್ರಮುಖ ಸೇವೆ ಮತ್ತು ಸಾಧನೆಗಳ ವಿವರಗಳು ಹೀಗಿವೆ:
ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿ ಮತ್ತು ಆದೇಶ
ಕಬ್ಬು ಬೆಳೆಗಾರರಿಗೆ ನ್ಯಾಯಸಮ್ಮತ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ 2025-26ನೇ ಹಂಗಾಮಿನಲ್ಲಿ ಕಬ್ಬಿಗೆ ಹೆಚ್ಚುವರಿ ಬೆಲೆಯನ್ನು ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರನ್ವಯ ಶೇ. 10.25 ರಷ್ಟು ಇಳುವರಿ ಇರುವ ಕಬ್ಬಿಗೆ ಪ್ರತಿ ಟನ್ಗೆ ₹3,200 ಹಾಗೂ ಶೇ. 11.25 ರಷ್ಟು ಇಳುವರಿ ಹೊಂದಿರುವ ಕಬ್ಬಿಗೆ ಪ್ರತಿ ಟನ್ಗೆ ₹3,300 ದರವನ್ನು ನಿಗದಿಪಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಕಬ್ಬು ಬೆಳೆಗಾರರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ಸಿಕ್ಕಂತಾಗಿದೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ.… pic.twitter.com/ryZm8PNYrL
— DIPR Karnataka (@KarnatakaVarthe) May 23, 2026
ಸಕ್ಕರೆ ಕಾರ್ಖಾನೆ ಪ್ರದೇಶಗಳ ರಸ್ತೆ ಅಭಿವೃದ್ಧಿ
ಕಬ್ಬು ಸಾಗಣೆಯನ್ನು ಸರಳಗೊಳಿಸಲು ಮತ್ತು ಸಕ್ಕರೆ ಕಾರ್ಖಾನೆಗಳ ಸುತ್ತಮುತ್ತಲಿನ ಗ್ರಾಮೀಣ ಭಾಗದ ರಸ್ತೆಗಳನ್ನು ಬಲಪಡಿಸಲು ಸರ್ಕಾರ ವಿಶೇಷ ಗಮನ ಹರಿಸಿದೆ. ‘ಸಕ್ಕರೆ ಕಾರ್ಖಾನೆಗಳ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಯೋಜನೆ’ಯಡಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹8.03 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ಈಗಾಗಲೇ ₹4.03 ಕೋಟಿ ಹಣವನ್ನು ಅತ್ಯಂತ ಯಶಸ್ವಿಯಾಗಿ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ವ್ಯಯಿಸಲಾಗಿದೆ. ಇದರಿಂದ ಕಬ್ಬು ಸಾಗಣೆ ವಾಹನಗಳ ಸಂಚಾರ ಸುಗಮಗೊಂಡಿದೆ.
ಕಬ್ಬು ಅರೆಯುವ ದಿನಾಂಕ ನಿಗದಿ ಹಾಗೂ ಇಳುವರಿ ಸುಧಾರಣೆ
ರಾಜ್ಯದ ದಕ್ಷಿಣ ಮತ್ತು ಉತ್ತರ ಭಾಗದ ಹವಾಮಾನ ಮತ್ತು ಕಬ್ಬಿನ ಬೆಳವಣಿಗೆಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, 2024-25 ಮತ್ತು 2025-26ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ (Crushing) ದಿನಾಂಕಗಳನ್ನು ಮುಂಚಿತವಾಗಿಯೇ ನಿಗದಿಪಡಿಸಲಾಗಿದೆ. ಸರ್ಕಾರದ ಈ ವ್ಯವಸ್ಥಿತ ರಣತಂತ್ರದಿಂದಾಗಿ ಕಬ್ಬಿನ ಇಳುವರಿ (Recovery) ಹಾಳಾಗುವುದು ತಪ್ಪಿದೆ. ಇದರ ನೇರ ಧನಾತ್ಮಕ ಪರಿಣಾಮವಾಗಿ ರಾಜ್ಯದಲ್ಲಿ ಒಟ್ಟಾರೆ ಸಕ್ಕರೆ ಉತ್ಪಾದನೆ ಹಾಗೂ ಇಳುವರಿಯ ಗುಣಮಟ್ಟದಲ್ಲಿ ಅಭೂತಪೂರ್ವ ಸುಧಾರಣೆ ಕಂಡುಬಂದಿದೆ.
BREAKING: ಆನ್ಲೈನ್ ಟಿಕೆಟ್ ಬುಕಿಂಗ್ ಸಂಸ್ಥೆಗಳ ಸುಲಿಗೆಗೆ ಬ್ರೇಕ್: ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆದೇಶ
ಶಿವಮೊಗ್ಗ: ಮೇ.25ರಂದು ಸೊರಬದ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut








