Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ನಡೆದಿದೆ.

ಕಲಬುರಗಿಯ ನಿವಾಸಿ ರಾಜಶೇಖರ್ ಎಂಬುವವರ ಪುತ್ರಿ ಭಾಗ್ಯಶ್ರೀ (18) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೇ 2ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು (NEET) ಬರೆದಿದ್ದ ಭಾಗ್ಯಶ್ರೀ, ವೈದ್ಯಕೀಯ ಶಿಕ್ಷಣದ ಸೀಟು ಸಿಗುವ ಬಗ್ಗೆ ಬಹಳ ದೊಡ್ಡ ನಿರೀಕ್ಷೆಗಳನ್ನು ಹೊಂದಿದ್ದಳು ಎನ್ನಲಾಗಿದೆ.

ದ್ವಿತೀಯ ಪಿಯುಸಿಯಲ್ಲಿ ಶೇ.92 ಅಂಕ ಗಳಿಸಿದ್ದ ಪ್ರತಿಭಾವಂತೆ

ಮೃತ ಭಾಗ್ಯಶ್ರೀ ಓದಿನಲ್ಲಿ ಅತ್ಯಂತ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಇತ್ತೀಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಕೆ ಶೇ. 92ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯೆಯಾಗಬೇಕೆಂಬ ಆಸೆಯಿಂದ ನೀಟ್ ಪರೀಕ್ಷೆಗೂ ಕಠಿಣ ತಯಾರಿ ನಡೆಸಿದ್ದಳು. ಆದರೆ, ಸದ್ಯಕ್ಕೆ ಆಕೆಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ.

“ನಾವು ಯಾರ ಮೇಲೆ ದೂರೋಣ?” – ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ತಂದೆ

ಘಟನೆ ಕುರಿತು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಭಾಗ್ಯಶ್ರೀ ತಂದೆ ರಾಜಶೇಖರ್, “ನಮ್ಮ ಮಗಳು ಕುಟುಂಬದ ಎಲ್ಲಾ ಸದಸ್ಯರ ಜೊತೆ ಬಹಳ ಚೆನ್ನಾಗಿ, ನಗುನಗುತ್ತಾ ಇದ್ದಳು. ಆದರೆ ಈಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಮೇಲೆ ತಾನೇ ದೂರೋಣ? ನಾವು ಯಾರ ಮೇಲೂ ಯಾವುದೇ ರೀತಿಯ ಆಪಾದನೆ ಮಾಡುವುದಿಲ್ಲ,” ಎಂದು ಅತ್ಯಂತ ಭಾವುಕರಾಗಿ ನುಡಿದಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ

ಘಟನೆ ನಡೆದಿರುವ ಸ್ಥಳಕ್ಕೆ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

BIG NEWS: ‘ಖಾಸಗಿ ಶಾಲೆ’ಗಳ ಶುಲ್ಕ ಹೆಚ್ಚಳಕ್ಕೆ ‘ಸರ್ಕಾರದ ಮುಂಚಿತ ಅನುಮತಿ’ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Share. Facebook Twitter LinkedIn WhatsApp Email

Related Posts

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

2 Mins Read
Recent News

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

State News
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ…

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.