Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್
KARNATAKA

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

By ವಸಂತ ಬಿ ಈಶ್ವರಗೆರೆ

ಉತ್ತರ ಕನ್ನಡ: ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿ ಬಳಿ ಕಾಳಿ ನದಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ರೆಸಾರ್ಟ್ ಒಂದರ ನಿರ್ಲಕ್ಷ್ಯಕ್ಕೆ ಪ್ರವಾಸಿಗರೊಬ್ಬರು ಬಲಿಯಾಗಿದ್ದು, ರ್ಯಾಫ್ಟಿಂಗ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಬೆಂಗಳೂರಿನ ಇಂಜಿನಿಯರ್ ಒಬ್ಬರು ಸಾವನ್ನಪ್ಪಿದ್ದಾರೆ.

ವಿಜಯವಾಡ ಮೂಲದ, ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ (27) ದುರ್ಮರಣಕ್ಕೀಡಾದ ದುರ್ದೈವಿ. ಅದೃಷ್ಟವಶಾತ್ ಇವರೊಂದಿಗಿದ್ದ ಉಳಿದ ನಾಲ್ವರು ಇಂಜಿನಿಯರ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ:

ಬೆಂಗಳೂರಿನಿಂದ ಇಂಜಿನಿಯರ್‌ಗಳ ತಂಡವೊಂದು ಗಣೇಶಗುಡಿಯ ಪ್ರಸಿದ್ಧ ‘ಸಿಲ್ವರ್ ಬಿಲ್ ರೆಸಾರ್ಟ್’ಗೆ ಪ್ರವಾಸಕ್ಕೆಂದು ಬಂದಿತ್ತು. ಕಾಳಿ ನದಿಯಲ್ಲಿ ರ್ಯಾಫ್ಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ, ರೆಸಾರ್ಟ್‌ನವರು ನದಿಗೆ ನೀರೆತ್ತಲು ಅಳವಡಿಸಿದ್ದ ಪಂಪ್ ಸೆಟ್‌ನಿಂದ ದಿಢೀರನೆ ನದಿಯ ನೀರಿನಲ್ಲಿ ವಿದ್ಯುತ್ ಪ್ರವಹಿಸಿದೆ. ಇದರ ತೀವ್ರತೆಗೆ ಸಿಲುಕಿದ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರೆಸಾರ್ಟ್ ಮಾಲೀಕರ ಬೇಜವಾಬ್ದಾರಿತನಕ್ಕೆ ಆಕ್ರೋಶ:

ಪ್ರವಾಸಿಗರು ಸಾಹಸ ಕ್ರೀಡೆಯಾದ ರ್ಯಾಫ್ಟಿಂಗ್ ಮಾಡುವ ಜಾಗದಲ್ಲೇ ರೆಸಾರ್ಟ್‌ನವರು ವಿದ್ಯುತ್ ಪಂಪ್ ಅಳವಡಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆಯಾಗಿ ಮೊದಲೇ ಎಚ್ಚರಿಸಿದ್ದರೂ, ರೆಸಾರ್ಟ್ ಮಾಲೀಕರು ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರು ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಲೀಕರ ಈ ಬೇಜವಾಬ್ದಾರಿತನವೇ ಇಂಜಿನಿಯರ್ ಸಾವಿಗೆ ನೇರ ಕಾರಣ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read
Recent News

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

State News
KARNATAKA

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: “ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಶುಚಿರುಚಿಯಾದ ಆಹಾರವನ್ನು ನೀಡಬೇಕು. ಹಾಸ್ಟೆಲ್ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ, ಮಕ್ಕಳು ಸಹ ಶುಚಿತ್ವ ಕಾಪಾಡಿಕೊಳ್ಳುವಂತೆ…

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.