ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಇಂದು (ಮೇ 24) ಭಾನುವಾರ ಒಟ್ಟು 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ನಾಳೆ ಕೂಡ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಇಲ್ಲಿ ಗುಡುಗು ಮಿಂಚಿನೊಂದಿಗೆ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮೇ 25ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಬೀಳುವ ಸಾಧ್ಯತೆಯಿದೆ.








