ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್‌ನಿಂದ ನಗರದ 59ನೇ ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಪ್ರಕರಣದ ಕನಿಷ್ಠ ಪ್ರಮುಖ 60 ಪ್ರಮುಖ ಸಾಕ್ಷಿ ಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಕಡ್ಡಾಯವಾಗಿ ಮುಗಿಸಬೇಕು ಸುಪ್ರೀಂಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಜೂ.1ರಿಂದ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ. ಎಂಬ
ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಆದೇಶದ ಅನ್ವಯ, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸುವ ಹಾಗೂ ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳ ಮಾರ್ಗಸೂಚಿಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸುಜಾತಾ ಎಂ.ಸಾಮ್ರಾಣಿ ಅವರು ಕೊಲೆ ನ್ಯಾಯಾಲಯ ನಿರ್ಧರಿಸಲಿದೆ. ನ್ಯಾ. ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
ಇದೇ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದು ಹೊರಗಿರುವ 5 ಆರೋಪಿಗಳ ಜಾಮೀನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿರುವ ಹೈಕೋರ್ಟ್, ಸದ್ಯ ತನ್ನ ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಹೈಕೋಟ್ ೯ಗೂ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿಯನ್ನು ಸಲ್ಲಿಸಲಾಗಿದೆ.








