ರಾಯಚೂರು : ರಾಜ್ಯದಲ್ಲಿ ಹಾರ್ಟ್ ಅಟ್ಯಾಕ್ ಗೆ ಮತ್ತೊಂದು ಬಲಿಯಾಗಿದ್ದು, ರಾಯಚೂರಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕ ಒಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ನಡೆದಿದೆ.
ಚಿಂಚೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಮಿಕ ನಾಗಪ್ಪ (51) ಸವಣ್ಣಪ್ಪಿದ್ದಾರೆ. ಬೆಳಿಗ್ಗೆ ಎಂದಿನಂತೆ ನರೇಗಾ ಕೆಲಸಕ್ಕೆ ನಾಗಪ್ಪ ಹೋಗಿದ್ದ ಗಿಡಗಂಟಿಗಳನ್ನ ಕಡಿಯುವಾಗ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ನಾಗಪ್ಪ ಕೊನೆಯುಸಿರು ಎಳೆದಿದ್ದಾನೆ.








