Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : `NEET-UG’ 2026 ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : NTAಗೆ ಸುಪ್ರೀಂ ಕೋರ್ಟ್ ನೋಟಿಸ್ | Supreme Court

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ
KARNATAKA

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

By ಸುರೇಶ್‌

ಕಾರ್ಕಳ, ಮೇ 25: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹರಿಸಲು ಕೊನೆಯ ಅವಕಾಶ ದೊರೆತಿದ್ದು, ಸರ್ವೋನ್ನತ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಸಲುವಾಗಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಮೊದಲಿಗೆ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದಾಗ 9 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಎಂದು ಗುರುತಿಸಲಾಗಿತ್ತು, ನಂತರ 2022ರಲ್ಲಿ ಪ್ರಮಾಣಪತ್ರ ಸಲ್ಲಿಸಿದಾಗ 3 ಲಕ್ಷ 33 ಸಾವಿರ ಹೆಕ್ಟೇರ್ ಜಮೀನು ಎಂದು ಪರಿಷ್ಕರಿಸಲಾಯಿತು. ಆಗ ಸಮರ್ಪಕವಾಗಿ ಸರ್ವೆ ನಡೆಸದೆ, ಖುದ್ದು ಪರಿಶೀಲಿಸದ ಕಾರಣ ಸರ್ಕಾರಿ ಕಟ್ಟಡ, ಶಾಲೆ, ಆಸ್ಪತ್ರೆ, ಪಟ್ಟಾ ಭೂಮಿ ಸೇರಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದು, ಈ ಲೋಪ ಸರಿಪಡಿಸಬೇಕಾಗಿದೆ ಎಂದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ದಂಡ ಮತ್ತು ಇತರ ಶುಲ್ಕವನ್ನು ಪಾವತಿಸಬೇಕಾಗಿದೆ. ಪ್ರಸ್ತುತ ಹೈಕೋರ್ಟ್ ಈ ಸಂಬಂಧ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೂ ಮುನ್ನ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿದ ಈಶ್ವರ ಖಂಡ್ರೆ ದೇವರ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ, ಮಳೆ, ಬೆಳೆ, ಆಗಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್, ಕಮಲಾ ಕರಿಕಳನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

1 Min Read

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

1 Min Read

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

2 Mins Read
Recent News

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : `NEET-UG’ 2026 ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : NTAಗೆ ಸುಪ್ರೀಂ ಕೋರ್ಟ್ ನೋಟಿಸ್ | Supreme Court

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

State News
KARNATAKA

ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ನೀಡಿ: ಈಶ್ವರ ಖಂಡ್ರೆ

By ಸುರೇಶ್‌ KARNATAKA 1 Min Read

ಕಾರ್ಕಳ, ಮೇ 25: ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದ್ದು, ಅವರ ಸುರಕ್ಷತೆಗಾಗಿ ವಿದ್ಯುತ್ ಪ್ರವಹಿಸುವ ಕೈಗೋಲು (ಸ್ಟಿಕ್),…

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.