Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು ಹಾಗೂ ಮಹಿಳೆಯರು ಕಳೆದ ಎರಡು ಹಗಲು ಮತ್ತು ಎರಡು ರಾತ್ರಿಗಳಿಂದ ಗ್ಯಾಸ್ ಏಜೆನ್ಸಿ ಮುಂದೆ ಸಾಲುಗಟ್ಟಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ.

ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ಗ್ಯಾಸ್ ಸರಬರಾಜು ಸಂಪೂರ್ಣ ವ್ಯತ್ಯಯಗೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚಾಪೆ, ದಿಂಬು ಹಿಡಿದು ಫುಟ್‌ಪಾತ್‌ನಲ್ಲೇ ವಾಸ್ತವ್ಯ!

ಗ್ಯಾಸ್ ಸಿಲಿಂಡರ್ ಪಡೆಯಲು ಗ್ರಾಮಸ್ಥರು ಪಡುತ್ತಿರುವ ಪಾಡು ನಿಜಕ್ಕೂ ಮರುಕ ಹುಟ್ಟಿಸುವಂತಿದೆ. ಸಿಲಿಂಡರ್ ಖಾಲಿಯಾಗಿ ಮನೆಯಲ್ಲಿ ಒಲೆ ಉರಿಯದ ಕಾರಣ, ಗ್ರಾಮಸ್ಥರು ಅನಿವಾರ್ಯವಾಗಿ ತಮ್ಮ ಮನೆಗಳಿಂದ ಚಾಪೆ, ದಿಂಬು, ಚಾದರ್ ಹಾಗೂ ಖಾಲಿ ಸಿಲಿಂಡರ್‌ಗಳನ್ನು ಹಿಡಿದುಕೊಂಡು ಗ್ಯಾಸ್ ಏಜೆನ್ಸಿ ಎದುರು ಜಮಾಯಿಸುತ್ತಿದ್ದಾರೆ. ಹಗಲಿಡೀ ಬಿಸಿಲಿನಲ್ಲಿ ಕಾಯುವ ಸಾರ್ವಜನಿಕರು, ರಾತ್ರಿಯಾಗುತ್ತಿದ್ದಂತೆ ಏಜೆನ್ಸಿ ಅಂಗಡಿಯ ಮುಂಭಾಗದ ಫುಟ್‌ಪಾತ್ ಹಾಗೂ ರಸ್ತೆ ಬದಿಯಲ್ಲೇ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.

“ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಗ್ಯಾಸ್ ಸಿಗುತ್ತಿಲ್ಲ. ತಡವಾಗಿ ಬಂದರೆ ಸಿಲಿಂಡರ್ ಸಿಗುವುದಿಲ್ಲ ಎಂಬ ಭೀತಿಯಿಂದಾಗಿ ನಾವು ರಾತ್ರಿಯಿಡೀ ಅಂಗಡಿ ಮುಂದೆಯೇ ಮಲಗುತ್ತಿದ್ದೇವೆ. ಆದರೂ ನಮಗೆ ಗ್ಯಾಸ್ ಸಿಗುತ್ತಿಲ್ಲ” ಎಂದು ಸ್ಥಳೀಯ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಗ್ರಾಮದಲ್ಲಿ ಎದುರಾಗಿರುವ ಈ ಗಂಭೀರ ಸಮಸ್ಯೆಯ ಕುರಿತು ಸಂಬಂಧಪಟ್ಟ ಆಹಾರ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಆಡಳಿತಕ್ಕೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯದ ವಿರುದ್ಧ ಸಾಲಗುಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ಗ್ಯಾಸ್ ಏಜೆನ್ಸಿಗೆ ಅಗತ್ಯವಿರುವಷ್ಟು ಸಿಲಿಂಡರ್ ಪೂರೈಕೆ ಮಾಡಿ ಸಾರ್ವಜನಿಕರ ಸಂಕಷ್ಟವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

Share. Facebook Twitter LinkedIn WhatsApp Email

Related Posts

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read
Recent News

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.