Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ : ಸುಪ್ರೀಂ ಕೋರ್ಟ್‌ನಿಂದ ಇಂದು ಮಹತ್ವದ ತೀರ್ಪು ಪ್ರಕಟ

BIG NEWS : ರಾಜ್ಯದ ಗ್ರಾ.ಪಂಚಾಯಿತಿ PDO, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ, ಸಾರ್ವಜನಿಕರ ಭೇಟಿಗೆ ಸಮಯ ನಿಗದಿ: ಸರ್ಕಾರದಿಂದ ಮಹತ್ವದ ಆದೇಶ

ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಗ್ರಾ.ಪಂಚಾಯಿತಿ PDO, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ, ಸಾರ್ವಜನಿಕರ ಭೇಟಿಗೆ ಸಮಯ ನಿಗದಿ: ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಗ್ರಾ.ಪಂಚಾಯಿತಿ PDO, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ, ಸಾರ್ವಜನಿಕರ ಭೇಟಿಗೆ ಸಮಯ ನಿಗದಿ: ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಕುಂದು-ಕೊರತೆಗಳಿಗೆ ತಕ್ಷಣ ಸ್ಪಂದಿಸಲು ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯವು ಹೊಸದೊಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕಾರ್ಯದರ್ಶಿಗಳು ಸಾರ್ವಜನಿಕರ ಭೇಟಿಗೆ ಸಿಗುತ್ತಿಲ್ಲ, ಕ್ಷೇತ್ರ ಕಾರ್ಯದ ನೆಪದಲ್ಲಿ ಕಚೇರಿಯಿಂದ ಹೊರಗುಳಿಯುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸಿನ ಮೇರೆಗೆ ಹೊರಡಿಸಲಾದ ಈ ಆದೇಶದ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ:

ಸಾರ್ವಜನಿಕರ ಭೇಟಿಗೆ ನಿಗದಿತ ಸಮಯ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಸಾರ್ವಜನಿಕರ ಭೇಟಿಗಾಗಿ ಪ್ರತಿದಿನ ಕಡ್ಡಾಯವಾಗಿ ಸಮಯವನ್ನು ನಿಗದಿಪಡಿಸಬೇಕು. ಆ ನಿಗದಿತ ಅವಧಿಯಲ್ಲಿ ಕಚೇರಿಯಲ್ಲೇ ಇದ್ದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಬೇಕು.

ಪ್ರವಾಸದ ವಿವರ ಪ್ರಕಟಣೆ ಕಡ್ಡಾಯ: ಪ್ರತಿ ವಾರ ಸೋಮವಾರದಿಂದ ಶನಿವಾರದವರೆಗೆ ಅಧಿಕಾರಿಗಳು ಕೈಗೊಳ್ಳುವ ಕ್ಷೇತ್ರ ಭೇಟಿ, ತರಬೇತಿ ಹಾಗೂ ತಾಲ್ಲೂಕು/ಜಿಲ್ಲಾ ಪಂಚಾಯಿತಿ ಸಭೆಗಳ ದಿನಚರಿ ಸೇರಿದಂತೆ ಅವರ ದೈನಂದಿನ ಪ್ರವಾಸ ಕಾರ್ಯಕ್ರಮದ ವಿವರಗಳನ್ನು ಕಡ್ಡಾಯವಾಗಿ ಗ್ರಾಮ ಪಂಚಾಯಿತಿ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಬೇಕು.

ಪಂಚತಂತ್ರ 2.0 ಮೂಲಕ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO), ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ದಾಖಲಿಸಬೇಕು.

ಸಿಬ್ಬಂದಿಗಳಿಗೂ ಬಯೋಮೆಟ್ರಿಕ್ ಕಡ್ಡಾಯ: ಕರವಸೂಲಿಗಾರರು, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್‌ಗಳು, ಸ್ವಚ್ಛತಾಗಾರರು, ನೀರುಗಂಟಿಗಳು ಮತ್ತು ಗ್ರಂಥಪಾಲಕರು ಸೇರಿದಂತೆ ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳೂ ಪ್ರತಿದಿನ ಪಂಚತಂತ್ರ 2.0 ಮೂಲಕ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವುದನ್ನು ಪಿಡಿಒಗಳು ಖಚಿತಪಡಿಸಿಕೊಳ್ಳಬೇಕು.

ಹಾಜರಾತಿ ಆಧಾರದ ಮೇಲಷ್ಟೇ ವೇತನ ಬಿಡುಗಡೆ: ಗ್ರಾಮ ಪಂಚಾಯಿತಿಯ ಎಲ್ಲಾ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಗಳ ಪ್ರತಿ ತಿಂಗಳ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲಷ್ಟೇ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (EO) ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಹಾಗೂ ಕಾರ್ಯದರ್ಶಿಗಳು ಸಾರ್ವಜನಿಕರಿಗೆ ಸರಿಯಾಗಿ ಸಿಗುತ್ತಿಲ್ಲ, ಕೆಲಸದ ಮೇಲೆ ಹೋಗಿರುವುದಾಗಿ ಹೇಳಿದರೂ ಚಲನವಲನ ಪುಸ್ತಕದಲ್ಲಿ (Movement Register) ಯಾವುದೇ ದಾಖಲೆ ಇರುವುದಿಲ್ಲ ಎಂದು ಕಲ್ಯಾಣ ಸಮಿತಿಯು ತನ್ನ ವರದಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಪಾರದರ್ಶಕತೆ ತರಲು ಈ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯದ ಅಭಿವೃದ್ಧಿ ನಿರ್ದೇಶಕರು ಕಡಕ್ ಸೂಚನೆ ನೀಡಿದ್ದಾರೆ.

BIG NEWS: Biometric attendance mandatory for state Gram Panchayat PDO staff time fixed for public visits: Important order from the government
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!

1 Min Read

BREAKING : ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ `ಬ್ರೇಕ್‌ ಫಾಸ್ಟ್‌’ ಮೀಟಿಂಗ್‌ : DCM ಡಿಕೆಶಿಗೆ ಆತಿಥ್ಯ

1 Min Read

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

1 Min Read
Recent News

BREAKING: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ : ಸುಪ್ರೀಂ ಕೋರ್ಟ್‌ನಿಂದ ಇಂದು ಮಹತ್ವದ ತೀರ್ಪು ಪ್ರಕಟ

BIG NEWS : ರಾಜ್ಯದ ಗ್ರಾ.ಪಂಚಾಯಿತಿ PDO, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ, ಸಾರ್ವಜನಿಕರ ಭೇಟಿಗೆ ಸಮಯ ನಿಗದಿ: ಸರ್ಕಾರದಿಂದ ಮಹತ್ವದ ಆದೇಶ

ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!

ಕೆಲಸದ ಕಾರ್ಯಗಳಿಗೆ ‘ಪರ್ಪ್ಲೆಕ್ಸಿಟಿ’ಯೇ ಬೆಸ್ಟ್: ಚಾಟ್‌ಜಿಪಿಟಿಗೆ ಸಿಕ್ಕಿದ್ದು ಆರನೇ ಸ್ಥಾನ : ಸಮೀಕ್ಷೆ

State News
KARNATAKA

BIG NEWS : ರಾಜ್ಯದ ಗ್ರಾ.ಪಂಚಾಯಿತಿ PDO, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ, ಸಾರ್ವಜನಿಕರ ಭೇಟಿಗೆ ಸಮಯ ನಿಗದಿ: ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಕುಂದು-ಕೊರತೆಗಳಿಗೆ ತಕ್ಷಣ ಸ್ಪಂದಿಸಲು ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರದ…

ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!

BREAKING : ನಾಳೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಹತ್ವದ `ಬ್ರೇಕ್‌ ಫಾಸ್ಟ್‌’ ಮೀಟಿಂಗ್‌ : DCM ಡಿಕೆಶಿಗೆ ಆತಿಥ್ಯ

BREAKING : ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.