ಮಂಡ್ಯ : ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ನಡೆದಿದೆ.
ಹಟ್ನ ಗ್ರಾಮದ ತಾಯಮ್ಮ (60) ಮೃತಪಟ್ಟ ಮಹಿಳೆ. ದೇವರ ಕಾರ್ಯಕ್ಕೆ ನಾಗಮಂಗಲದ ಹೆಗಟಿ ಗ್ರಾಮಕ್ಕೆ ತೆರಳಿದ್ದ ಹಟ್ನ ಗ್ರಾಮದ ಜನರು. ವಾಪಸ್ಸು ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ತಾಯಮ್ಮ ಸ್ಥಳದಲ್ಲೆ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡಿರುವ 10 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರ್ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸರಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








