ಬೆಂಗಳೂರು : ಅಂದುಕೊಂಡಂತೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಹುತೇಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಹಾಗಾಗಿ ಅವರು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕೂಡ ಇದೆ.
ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಅಂಗಳದಲ್ಲಿ ಚರ್ಚೆ ನಡೆದಿದ್ದು ಸಿಎಂ ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರ ರಾಜೀನಾಮೆ ಕೂಡ ನಡೆಯುತ್ತೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡಿದಂತೆ ಆ ಒಂದು ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು ಇಟ್ಟಿದ್ದಾರೆ. ಕೆಲ ನಾಯಕರ ಜೊತೆಗೆ ಸತೀಶ್ ಜಾರಕಿಹೊಳಿ ಮಾತುಕತೆ ಕೂಡ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ ಬಳಿಕ ಸತೀಶ್ ಜಾರಕಿಹೊಳಿಗೆ ಬುಲಾವ್ ಸಾಧ್ಯತೆ ಇದೆ. ಮಂತ್ರಿ ಸ್ಥಾನದ ಜೊತೆಗೆ ಅಧ್ಯಕ್ಷ ಸ್ಥಾನವನ್ನು ಕೂಡ ಸತೀಶ್ ಜಾರಕಿಹೊಳಿ ಕೇಳಿದ್ದಾರೆ.ನಾಲ್ವರು ಡಿಸಿಎಂ ಬಳಿಕ ಸಾಮಾಜಿಕ ಸಮೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ.








