ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರ ಅಪಾರ ಅಭಿಮಾನಿಗಳು ಸಿದ್ಧರಾಮಯ್ಯ ನಿವಾಸದ ಮುಂದೆ ಜಮಾವಣೆಗೊಂಡಿದ್ದು, ನಮ್ಮ ಸಿದ್ಧರಾಮಯ್ಯ ಅವರಿಗೆ ಅನ್ಯಾಯವಾಗಿದೆ. ಅವರನ್ನು ಸಿಎಂ ಆಗಿಯೇ ಮುಂದುವರೆಸುವಂತೆ ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿನ ದಿಢೀರ್ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ತಿರುವುಗಳು ಘಟಿಸುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡುವಂತ ವಿಷಯವನ್ನು ತಿಳಿದಂತ ಅವರ ಅಪಾರ ಅಭಿಮಾನಿಗಳು, ಬೆಂಗಳೂರಿನ ನಿವಾಸದ ಮುಂದೆ ಜಮಾವಣೆಗೊಂಡಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರ ನಿವಾಸದ ಮುಂದೆ ಜಮಾಯಿಸಿರುವಂತ ಅಭಿಮಾನಿಗಳು, ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿಯೇ ಮುಂದುವರೆಸಬೇಕು. ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬಾರದು ಎಂಬುದಾಗಿ ಒತ್ತಾಯಿಸಿದರು.
ಇನ್ನೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುತ್ತಿರೋದಕ್ಕೆ ಕಾರಣವೇ ಕಾಂಗ್ರೆಸ್ ಹೈಕಮಾಂಡ್ ಆಗಿದೆ. ಇದು ಸರಿಯಲ್ಲ. ಇದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂಬುದಾಗಿಯೂ ಆಕ್ರೋಶವನ್ನು ಹೊರಹಾಕಿದ್ದಾರೆ.
ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ಅಹಿಂದ ಮುಖಂಡರು ಸಭೆ ನಡೆಸಿ, ಸಿಎಂ ಸಿದ್ಧರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು. ಇದನ್ನು ವಿರೋಧಿಸಿ ನಾಳೆ ರಾಜ್ಯಾಧ್ಯಂತ ಅಹಿಂದ ಸಂಘಟನೆ, ಕುರುಬರ ಸಂಘದಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಮುಖಂಡರು ತಿಳಿಸಿದ್ದಾರೆ.








