ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದ್ದು, ಎಲ್ಲ ಸಚಿವರು ಈ ಒಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. ಯಾವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿದರೊ ಅಲ್ಲಿಂದ ಬಂದು ನೇರವಾಗಿ ಅವರು ಇಂದು ಸಂಪುಟದ ಎಲ್ಲ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದಾರೆ.
ಈ ಒಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರುಗಳು ಭಾಗವಹಿಸಲಿದ್ದಾರೆ. ಬಳಿಕ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ, ಆದರೆ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಂದ ಅವರು ಇಂದು ಮುಂಬೈಗೆ ತೆರಳಿದ್ದಾರೆ. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. ಅಕಸ್ಮಾತ್ ರಾಜ್ಯಪಾಲರು ಇಂದೇ ಬೆಂಗಳೂರಿಗೆ ವಾಪಸ್ ಆದರೆ ಹಿಂದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ.








