Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!
KARNATAKA

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

By kannadanewsnow57

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುಕಾಲದ ನಿರೀಕ್ಷೆಗೆ ತೆರೆ ಬಿದ್ದಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದ್ದು, ಮುಂಬರುವ ಸೋಮವಾರ ಅಥವಾ ಬುಧವಾರದ ಶುಭ ದಿನದಂದು ಗೋಧೂಳಿ ಮುಹೂರ್ತದಲ್ಲಿ ‘ಕನಕಪುರ ಬಂಡೆ’ ನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕರ ಮಹತ್ವದ ಸಭೆ ಆಯೋಜಿಸಲಾಗಿದೆ. ಎಐಸಿಸಿ ವೀಕ್ಷಕರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಒಮ್ಮತದ ನಾಯಕನನ್ನು ಆರಿಸಲು ಹೈಕಮಾಂಡ್ ತಂತ್ರ ರೂಪಿಸಿದೆ.

ವಿಶೇಷವೆಂದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಮುಂದಿನ ಸಿಎಲ್‌ಪಿ ನಾಯಕರೆಂದು ಪ್ರಸ್ತಾಪಿಸಲಿದ್ದಾರೆ. ಹಿರಿಯ ಶಾಸಕರು ಇದಕ್ಕೆ ಅನುಮೋದನೆ ನೀಡಲಿದ್ದು, ಕೇವಲ ಒಂದು ಸಾಲಿನ ನಿರ್ಣಯದ ಮೂಲಕ ಪ್ರಕ್ರಿಯೆ ಮುಗಿಯಲಿದೆ. ಶಾಸಕರಿಗೆ ವೈಯಕ್ತಿಕ ಅಭಿಪ್ರಾಯ ಮಂಡನೆಗೆ ಅವಕಾಶ ಇರುವುದಿಲ್ಲ. ಸಭೆಯ ಬಳಿಕ ಡಿ.ಕೆ.ಶಿ ಲೋಕಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಹೊಸ ಸರ್ಕಾರ ಬರುವವರೆಗೆ ಅವರು ಉಸ್ತುವಾರಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

ವಿಧಾನಸೌಧದ ಮುಂಭಾಗ ಭವ್ಯ ವೇದಿಕೆ: 10 ಸಚಿವರ ಟೀಮ್‌!

ತಮ್ಮ ಜೀವಮಾನದ ಕನಸಿನಂತೆ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆಯೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ದೇಶದ ಪ್ರಮುಖ ಗಣ್ಯರು ಸಾಕ್ಷಿಯಾಗಲಿದ್ದಾರೆ.

ಡಿ.ಕೆ.ಶಿ ಅವರೊಂದಿಗೆ ಮೊದಲ ಹಂತದಲ್ಲಿ 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಇದರಲ್ಲಿ ಎಷ್ಟು ಜನರಿಗೆ ಉಪಮುಖ್ಯಮಂತ್ರಿ (DCM) ಪಟ್ಟ ಸಿಗಲಿದೆ ಎಂಬುದು ಸಸ್ಪೆನ್ಸ್ ಆಗಿದೆ. ಸಿಎಂ ಸ್ಥಾನದ ಜೊತೆಗೆ ಆಯಕಟ್ಟಿನ ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳನ್ನು ಶಿವಕುಮಾರ್ ತಮ್ಮ ಬಳಿಯೇ ಉಳಿಸಿಕೊಳ್ಳಲಿದ್ದಾರೆ. ಜಲಸಂಪನ್ಮೂಲ ಹಾಗೂ ಗುಪ್ತಚರ ಇಲಾಖೆಗಳು ಯಾರ ಪಾಲಾಗಲಿವೆ ಎಂಬ ಕುತೂಹಲ ಮೂಡಿದೆ.

‘ಡಿಕೆಶಿ ಮಾಡೆಲ್’ ಅನ್ವಯ ತಮಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ಎರಡೂ ಬೇಕು ಎಂದು ಸತೀಶ್ ಜಾರಕಿಹೊಳಿ ಹಠ ಹಿಡಿದಿದ್ದಾರೆ. ಭವಿಷ್ಯದ ಅಹಿಂದ ನಾಯಕತ್ವದ ಮೇಲೆ ಕಣ್ಣಿಟ್ಟಿರುವ ಜಾರಕಿಹೊಳಿ ಅವರಿಗೆ ಸದ್ಯಕ್ಕೆ ಕೆಪಿಸಿಸಿ ಜವಾಬ್ದಾರಿಗೆ ಸಜ್ಜಾಗುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚಿಸಿದ್ದಾರೆ ಎನ್ನಲಾಗಿದೆ.

D.K. Shivakumar sworn in as new CM of Karnataka: Oath-taking ceremony at Godhuli Muhurta!
Share. Facebook Twitter LinkedIn WhatsApp Email

Related Posts

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

2 Mins Read

BIG NEWS : ಇಂದು ಸಂಜೆ 4ಕ್ಕೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ಹೊಸ ಮುಖ್ಯಮಂತ್ರಿ ಆಯ್ಕೆ.!

2 Mins Read

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read
Recent News

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

BIG NEWS : ಇಂದು ಸಂಜೆ 4ಕ್ಕೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ಹೊಸ ಮುಖ್ಯಮಂತ್ರಿ ಆಯ್ಕೆ.!

State News
KARNATAKA

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ…

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಗೆ ಪಟ್ಟಾಭಿಷೇಕ: ಗೋಧೂಳಿ ಮುಹೂರ್ತದಲ್ಲಿ ಪ್ರಮಾಣ ವಚನ ಸ್ವೀಕಾರ!

BIG NEWS : ಇಂದು ಸಂಜೆ 4ಕ್ಕೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ಹೊಸ ಮುಖ್ಯಮಂತ್ರಿ ಆಯ್ಕೆ.!

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.