ಬೆಂಗಳೂರು : ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಈಗಾಗಲೇ ಭರದ ಸಿದ್ಧತೆ ನಡೆದಿದ್ದು, ಅಂದುಕೊಂಡಂತೆ ಜೂನ್ 3ರಂದು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸ್ವಲ್ಪ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು ರಾಜಭವನದಲ್ಲಿಯೇ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಬುಧವಾರ ಡಿಕೆ ಶಿವಕುಮಾರ್ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಿರ್ಧರಿಸಲಾಗಿತ್ತು. ಇದೀಗ ಅಲ್ಲಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ. ಏಕೆಂದರೆ ಈ ಒಂದು ಕಾರ್ಯಕ್ರಮದಲ್ಲಿ ಹೆಚ್ಚು ಜನ ಸೇರುವ ಸಾಧ್ಯತೆ ಹಿನ್ನಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಲೋಕಭವನದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.
ಹೆಚ್ಚು ಜನ ಸೇರಿದರೆ ಅಹಿತಕರ ಘಟನೆ ನಡೆಯುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಲೋಕಭವನದಲ್ಲಿಯೇ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಡಿಕೆ ಸಾಂಗ್ ಶಿವಕುಮಾರ್ ಜೊತೆಗೆ 12 ರಿಂದ 14 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೊದಲ ಹಂತದಲ್ಲಿ ಹಿರಿಯ ನಾಯಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಸಿಎಂ ಪದಗ್ರಹಣ ಸಮಾರಂಭದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಹಾಗಾಗಿಯೇ ಲೋಕಭವನದಲ್ಲಿ ನೂತನ ಸಿಎಂ ಪದಗ್ರಹಣ ಸಮಾರಂಭಕ್ಕೆ ನಿರ್ಧರಿಸಲಾಗಿದೆ.








