ಬೆಂಗಳೂರು: 2026ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಸುದ್ದಿ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು (ಮೇ 30, ಶನಿವಾರ) ಮಧ್ಯಾಹ್ನ 4:00 ಗಂಟೆಗೆ 2026ರ ಎಸ್‌ಎಸ್‌ಎಲ್‌ಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶವನ್ನು ಆನ್‌ಲೈನ್ ಮೂಲಕ ಸುಲಭವಾಗಿ ವೀಕ್ಷಿಸಬಹುದಾಗಿದ್ದು, ಅದಕ್ಕಾಗಿ ಮಂಡಲಿಯು ಹಲವು ಮಾರ್ಗಗಳನ್ನು ಒದಗಿಸಿದೆ.
ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್‌ಸೈಟ್‌ಗಳು:
ಮಧ್ಯಾಹ್ನ 4 ಗಂಟೆಯ ನಂತರ ವಿದ್ಯಾರ್ಥಿಗಳು ಕೆಳಗೆ ನೀಡಿರುವ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ರಿಸಲ್ಟ್ ಪರಿಶೀಲಿಸಬಹುದು:
ಆಪ್ ಹಾಗೂ ಎಸ್‌ಎಂಎಸ್ ಮೂಲಕವೂ ಲಭ್ಯ:
ವೆಬ್‌ಸೈಟ್‌ಗಳಷ್ಟೇ ಅಲ್ಲದೆ, ವಿದ್ಯಾರ್ಥಿಗಳು ‘Karnataka One’ ಮೊಬೈಲ್ ಆಪ್ (Mobile App) ಮೂಲಕವೂ ತಮ್ಮ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಇದಲ್ಲದೆ, ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಗೆ ನೀಡಿರುವ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ನೇರವಾಗಿ ರವಾನಿಸಲಾಗುವುದು ಎಂದು ಮಂಡಲಿ ತಿಳಿಸಿದೆ.
ಡಿಜಿಲಾಕರ್‌ನಲ್ಲಿ ಅಂಕಪಟ್ಟಿ (Marks Card) ಲಭ್ಯ
ಫಲಿತಾಂಶ ಪ್ರಕಟವಾದ ತಕ್ಷಣವೇ, ಅಂದರೆ ಇಂದು ಮಧ್ಯಾಹ್ನ 4:00 ಗಂಟೆಯಿಂದಲೇ ವಿದ್ಯಾರ್ಥಿಗಳ ಡಿಜಿಟಲ್ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್‌ನಲ್ಲಿ ಲಭ್ಯಗೊಳಿಸಲಾಗುವುದು. ವಿದ್ಯಾರ್ಥಿಗಳು https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ವಿಡಿಯೋ ಗೈಡ್: ಅಂಕಪಟ್ಟಿಯನ್ನು ಡಿಜಿಲಾಕರ್‌ನಿಂದ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಯಲು ಮಂಡಲಿಯು ಈ ವಿಡಿಯೋ ಲಿಂಕ್ https://tinyurl.com/2ydk76c2 ಅನ್ನು ಕೂಡ ಹಂಚಿಕೊಂಡಿದೆ.
ಶಾಲೆಗಳಲ್ಲೂ ಲಭ್ಯ
ಅಂತರ್ಜಾಲದ ಸೌಲಭ್ಯವಿಲ್ಲದ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಆಯಾ ಸಂಬಂಧಪಟ್ಟ ಶಾಲೆಗಳಿಗೂ ಸಹ ಇಂದು ಮಧ್ಯಾಹ್ನ 4:00 ಗಂಟೆಗೆ ಅಧಿಕೃತ ಫಲಿತಾಂಶದ ಪಟ್ಟಿಯನ್ನು ಮಂಡಲಿಯ ವತಿಯಿಂದ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!








