ಮೈಸೂರು : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲಗನಕೆರೆ ಗೇಟ್ ಬಳಿ ಸಂಭವಿಸಿದೆ.
ಮೃತರನ್ನು ಸುದೀಪ್ ನಾಯಕ್ (26) ಹಾಗು ರಾಜ ನಾಯಕ್ (30) ಎಂದು ತಿಳಿದುಬಂದಿದೆ. ಮೃತ ರಾಜ ನಾಯಕಗೆ ಆರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ. ಅಪಘಾತದ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








