ಬೆಂಗಳೂರು : ನಿನ್ನೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್‌ಸಿಬಿ ತಂಡವನ್ನು ವಿಜಯ್ ಮಲ್ಯ ಕೊಂಡಾಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿ ನಿನಗೆ ಅಭಿನಂದನೆಗಳು. ಸತತ ಎರಡು ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದೀರಿ. ನಮ್ಮ ದೊಡ್ಡ ಸಿಂಹಗಳೇ ಜೋರಾಗಿ ಘರ್ಜಿಸಿ ಎಲ್ಲರೂ ಹೆಮ್ಮೆಪಡುವಂತೆ ಮಾಡಿದ್ದೀರಿ ಎಂದು ಹಾಡಿ ಹೊಗಳಿದ್ದಾರೆ.
RCB RCB….Congratulations Double back to back IPL Champions. Namma dodda Simhagulu roared loudly and made us all very proud. Very well done you beauties.
— Vijay Mallya (@TheVijayMallya) May 31, 2026








