ಬೆಂಗಳೂರು : ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎ ಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ,ಇದನ್ನು ಯಾರೂ ನಂಬಬಾರದು ಎಂದು ತಿಳಿಸಿದ್ದಾರೆ.








