Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

BREAKING : ಉಗ್ರರನ್ನು ಪೋಶಿಸುವವರಿಗೆ ಯಾವ ಕಾರಣಕ್ಕೂ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಡಿ.ಕೆ.ಶಿವಕುಮಾರ್ ಜೊತೆಗೆ 12 ಸಚಿವರು ಪ್ರಮಾಣವಚನ ಸ್ವೀಕಾರ? ಇಂದು ಫೈನಲ್ ಲಿಸ್ಟ್ ರಿಲೀಸ್ ಸಾಧ್ಯತೆ.!
KARNATAKA

BIG NEWS : ಡಿ.ಕೆ.ಶಿವಕುಮಾರ್ ಜೊತೆಗೆ 12 ಸಚಿವರು ಪ್ರಮಾಣವಚನ ಸ್ವೀಕಾರ? ಇಂದು ಫೈನಲ್ ಲಿಸ್ಟ್ ರಿಲೀಸ್ ಸಾಧ್ಯತೆ.!

By kannadanewsnow57

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ಕಸರತ್ತು ಜೋರಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಬುಧವಾರ ಯಾರೆಲ್ಲಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ 10 ರಿಂದ 12 ಶಾಸಕರಿಗೆ ಸಚಿವ ಸ್ಥಾನ ಸಿಗಲಿದ್ದು, ಅವರ ಅಂತಿಮ ಪಟ್ಟಿ ಮಂಗಳವಾರವೇ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ. ಇನ್ನು ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜನೆಗೊಂಡಿದೆ.

ಸಚಿವರ ಪಟ್ಟಿಗೆ ಮುದ್ರೆ ಒತ್ತಲು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರಮುಖ ಸಭೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜೊತೆ ಚರ್ಚಿಸಿ ಲಿಸ್ಟ್ ಫೈನಲ್ ಮಾಡಲಿದ್ದಾರೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಕೊಟ್ಟಿರುವ 12 ಜನರ ಪಟ್ಟಿಯಲ್ಲಿ 10 ಜನರಿಗೆ ಹಾಗೂ ಡಿ.ಕೆ. ಶಿವಕುಮಾರ್ ನೀಡಿದ 15 ಜನರ ಲಿಸ್ಟ್‌ನಲ್ಲಿ 12 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. ಸದ್ಯಕ್ಕೆ ಮೊದಲ ಹಂತದ ಒಡಂಬಡಿಕೆ ಮಾತ್ರ ನಡೆಯಲಿದ್ದು, ಬಾಕಿ ಉಳಿದ ಸಚಿವ ಸ್ಥಾನಗಳನ್ನು ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ನಂತರ ಭರ್ತಿ ಮಾಡಲು ಹೈಕಮಾಂಡ್ ಪ್ಲಾನ್ ಮಾಡಿದೆ. ಈಗಾಗಲೇ ಸೋಮವಾರ ರಾತ್ರಿ ಖರ್ಗೆ ಮತ್ತು ವೇಣುಗೋಪಾಲ್ ಅವರು ಉಭಯ ನಾಯಕರು ನೀಡಿದ ಲಿಸ್ಟ್ ಹಿಡಿದು ಪ್ರಾಥಮಿಕ ಸುತ್ತಿನ ಮಾತುಕತೆ ನಡೆಸಿದ್ದಾರೆ.

ರೇಸ್‌ ನಲ್ಲಿರುವ ಪ್ರಮುಖ ನಾಯಕರು ಯಾರು?
ಈ ಬಾರಿಯ ಸಂಪುಟದಲ್ಲಿ ಹೊಸಬರು ಮತ್ತು ಹಳಬರ ಮಿಶ್ರಣ ಇರಲಿದ್ದು, ಜಾತಿ ಮತ್ತು ಪ್ರಾದೇಶಿಕ ಲೆಕ್ಕಾಚಾರಕ್ಕೆ ಮನ್ನಣೆ ಸಿಗಲಿದೆ. ಸದ್ಯದ ಮಾಹಿತಿ ಪ್ರಕಾರ ಯತೀಂದ್ರ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಚ್.ಸಿ. ಮಹದೇವಪ್ಪ, ಸಂತೋಷ್ ಲಾಡ್ ಹಾಗೂ ಜಮೀರ್ ಅಹಮದ್ ಖಾನ್ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ.

12 ministers to take oath along with D.K. Shivakumar? Final list likely to be released today!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

2 Mins Read

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

1 Min Read

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

1 Min Read
Recent News

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

BREAKING : ಉಗ್ರರನ್ನು ಪೋಶಿಸುವವರಿಗೆ ಯಾವ ಕಾರಣಕ್ಕೂ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

State News
KARNATAKA

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ…

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.