Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ
KARNATAKA

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

By ವಸಂತ ಬಿ ಈಶ್ವರಗೆರೆ
ಬೆಂಗಳೂರು: ಜೂನ್ 3 ರ ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.

1. ಸಂಚಾರ ನಿರ್ಬಂಧಿತ ಮಾರ್ಗಗಳು

ಕಾರ್ಯಕ್ರಮದಲ್ಲಿ ಭಾಗವಹಿಸಲು ಅಧಿಕೃತ ಪಾಸ್ ಹೊಂದಿರುವ ವಾಹನಗಳನ್ನು ಹೊರತುಪಡಿಸಿ, ಕೆಳಕಂಡ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ:

  • ಕಬ್ಬನ್ ರಸ್ತೆ: ಬಿ.ಆ‌ರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ.

  • ಬಾಳೇಕುಂದ್ರಿ ಜಂಕ್ಷನ್: ಇಲ್ಲಿಂದ ಅಂಬೇಡ್ಕ‌ರ್ ರಸ್ತೆ ಕಡೆಗೆ ಬರುವ ವಾಹನಗಳು.

  • ಡಾ|| ಅಂಬೇಡ್ಕರ್ ರಸ್ತೆ: ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್‌ವರೆಗೆ.

  • ರೇಸ್‌ಕೋರ್ಸ್ ರಸ್ತೆ: ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಹಾಗೂ ಓಲ್ಡ್ ಜೆ.ಡಿ.ಎಸ್ ಕ್ರಾಸ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ.

  • ಕ್ಲೀನ್ಸ್ ಜಂಕ್ಷನ್: ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಓ ಕಡೆಗೆ ಸಂಚರಿಸುವ ವಾಹನಗಳು.

  • ಕ್ಲೀನ್ಸ್ ಜಂಕ್ಷನ್ (ಸೆಂಟ್ ಮಾರ್ಕ್ಸ್ ರಸ್ತೆ): ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಓ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

2. ಬದಲಿ ಪರ್ಯಾಯ ಮಾರ್ಗಗಳು

ಸಾರ್ವಜನಿಕರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಈ ಕೆಳಕಂಡ ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿ ವಿನಂತಿ:

  • ಕಬ್ಬನ್‌ ರಸ್ತೆಯ ಸವಾರರು: ಬಿ.ಆ‌ರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಕಡೆಗೆ ಹೋಗುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲತಿರುವು ಅಥವಾ ಅನಿಲ್‌ ಕುಂಬ್ಳೆ ಜಂಕ್ಷನ್ ಕಡೆಗೆ ಎಡ ತಿರುವು ಪಡೆದು ಸಂಚರಿಸಬಹುದು.

  • ಕ್ವೀನ್ಸ್ ರಸ್ತೆ ಮತ್ತು ಶಿವಾಜಿನಗರ ಸವಾರರು: ಈ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆಯ ಮುಖಾಂತರ ಮುಂದುವರಿಯಬಹುದು.

  • ಕೆ.ಆರ್. ಸರ್ಕಲ್ ಸವಾರರು: ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯ ಮುಖಾಂತರ ಹೋಗಬಹುದು.

  • ರೇಸ್‌ಕೋರ್ಸ್ ರಸ್ತೆಯ ಸವಾರರು: ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್ ಕಡೆಯಿಂದ ಶಿವಾನಂದ ಜಂಕ್ಷನ್ ಮೂಲಕ ಎಸ್.ಸಿ. ರಸ್ತೆ ಜಂಕ್ಷನ್ ತಲುಪಿ ಎಡತಿರುವು ಪಡೆದು ಚಲಿಸಬೇಕಾಗುತ್ತದೆ.

  • ಕ್ಲೀನ್ಸ್ ಜಂಕ್ಷನ್ ಸವಾರರು: ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್‌ಕುಂಬ್ಳೆ ಹಾಗೂ ಬಿ.ಆ‌ರ್.ವಿ. ಜಂಕ್ಷನ್ ಮುಖಾಂತರ ಹೋಗಬಹುದು.

  • ಹಲಸೂರು ಮತ್ತು ಹಳೆ ಏರ್‌ಪೋರ್ಟ್ ಕಡೆಯಿಂದ ಹೆಬ್ಬಾಳಕ್ಕೆ: ಕೆಂಪೇಗೌಡ ಏರ್‌ಪೋರ್ಟ್ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್‌ನಿಲ್ದಾಣದ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರ ಮಾರ್ಗವಾಗಿ ಹೆಬ್ಬಾಳ ಕಡೆಗೆ ಹೋಗಬಹುದು.

  • ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ ಸವಾರರು: ಹೆಬ್ಬಾಳ ಕಡೆಗೆ ಹೋಗುವವರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ತಲುಪಿ, ಅಲ್ಲಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಸಂಚರಿಸಬಹುದು.

  • ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ ಸವಾರರು: ಬಿ.ಆ‌ರ್.ವಿ ಜಂಕ್ಷನ್, ಶಿವಾಜಿನಗರ ಬಸ್‌ ನಿಲ್ದಾಣದ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸಬಹುದು.

3. ವಾಹನಗಳ ನಿಲುಗಡೆ ನಿಷೇಧಿತ ಸ್ಥಳಗಳು (ನೋ ಪಾರ್ಕಿಂಗ್)

ಸುಗಮ ಸಂಚಾರಕ್ಕಾಗಿ ಕೆಳಕಂಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ:

  • ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ (ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ).

  • ಲೋಕಭವನ ರಸ್ತೆ (ಬಿ.ಆ‌ರ್.ವಿ. ವೃತ್ತದಿಂದ ಲೋಕಭವನ ಜಂಕ್ಷನ್ ವರೆಗೆ).

  • ಎಲ್.ಹೆಚ್.ರಸ್ತೆ (ಲೋಕಭವನ ಜಂಕ್ಷನ್ ನಿಂದ ಚಾಲುಕ್ಯ ವೃತ್ತದ ವರೆಗೆ).

  • ಕ್ವೀನ್ಸ್ ರಸ್ತೆ (ಬಾಳೇಕುಂದ್ರಿ ಜಂಕ್ಷನ್‌ನಿಂದ ಕ್ವೀನ್ಸ್ ವೃತ್ತದ ವರೆಗೆ).

  • ಪ್ಯಾಲೇಸ್ ರಸ್ತೆ (ಮೈಸೂರು ಬ್ಯಾಂಕ್ ವೃತ್ತದಿಂದ ವಸಂತನಗರ ಕೆಳಸೇತುವೆ ವರೆಗೆ).

  • ದೇವರಾಜ ಅರಸ್ ರಸ್ತೆ (ಚಾಲುಕ್ಯ ವೃತ್ತದಿಂದ ಎಂ.ಎಸ್.ಬಿಲ್ಡಿಂಗ್ ವರೆಗೆ ಒಳಭಾಗದ ರಸ್ತೆ ಸೇರಿ).

  • ರೇಸ್ ಕೋರ್ಸ್ ರಸ್ತೆ (ವಿಲೈಟ್ ಜಂಕ್ಷನ್ ನಿಂದ ಚಾಲುಕ್ಯ ವೃತ್ತದ ವರೆಗೆ).

  • ಪಾರ್ಕ್‌ ಹೌಸ್ ರಸ್ತೆ (ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತದ ವರೆಗೆ).

  • ಕಬ್ಬನ್ ಉದ್ಯಾನವನದ ಒಳಭಾಗದ ಎಲ್ಲಾ ರಸ್ತೆಗಳು.

  • ಮಿಲ್ಲರ್ ರಸ್ತೆ (ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತದ ವರೆಗೆ).

  • ಇನ್‌ಫೆಂಟ್ರಿ ರಸ್ತೆ (ಅಲಿ ಆಸ್ಕರ್ ರಸ್ತೆ ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ ವರೆಗೆ).

  • ಅಲಿ ಆಸ್ಕರ್ ರಸ್ತೆ (ರಾಜಭವನ ಜಂಕ್ಷನ್ ನಿಂದ ಅಲಿ ಕ್ರಾಸ್ ವರೆಗೆ).

  • ಕೆ.ಜಿ.ರಸ್ತೆ (ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ).

  • ಹಳೇ ಅಂಚೆ ಕಛೇರಿ ರಸ್ತೆ (ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆ‌ರ್.ವೃತ್ತದ ವರೆಗೆ).

  • ನೃಪತುಂಗ ರಸ್ತೆ (ಕೆ.ಆ‌ರ್.ವೃತ್ತದಿಂದ ಪೊಲೀಸ್ ಕಾರ್ನರ್ ವರೆಗೆ).

  • ಕಸ್ತೂರಿಬಾ ರಸ್ತೆ (ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ).

  • ಮಲ್ಯ ಆಸ್ಪತ್ರೆ ರಸ್ತೆ (ಸಿದ್ಧಲಿಂಗಯ್ಯ ವೃತ್ತದಿಂದ ಆ‌ರ್.ಆರ್.ಎಂ.ಆರ್. ಜಂಕ್ಷನ್ ವರೆಗೆ).

  • ಆ‌ರ್.ಆ‌ರ್.ಎಂ.ಆರ್. ರಸ್ತೆ (ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡ್ಸನ್ ವೃತ್ತದ ವರೆಗೆ).

  • ಕಬ್ಬನ್ ರಸ್ತೆ (ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ಸೆಂಟರ್ ವರೆಗೆ).

  • ಟಿ.ಚೌಡಯ್ಯ ರಸ್ತೆ (ಹಳೇ ಹೈಗ್ರೌಂಡ್ಸ್ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್ ವರೆಗೆ).

  • ರಮಣ ಮಹರ್ಷಿ ರಸ್ತೆ (ಕಾವೇರಿ ಜಂಕ್ಷನ್ ನಿಂದ ಮೇಖ್ರಿ ವೃತ್ತದ ವರೆಗೆ).

4. ನಿಯೋಜಿತ ವಾಹನ ನಿಲುಗಡೆ ಸ್ಥಳಗಳು (ಪಾರ್ಕಿಂಗ್ ವ್ಯವಸ್ಥೆ)

ಎ) ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿರುವ ವಾಹನಗಳು:

  • ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತಲಿನ ಪ್ರದೇಶಗಳು.

  • ರಾಜಭವನ ಹಿಂಭಾಗದ ಎಲ್.ಹೆಚ್. ವಾಹನ ನಿಲುಗಡೆ ಸ್ಥಳ.

  • ನೆಹರೂ ತಾರಾಲಯದ ಆವರಣ.

ಬಿ) ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿಲ್ಲದ ವಾಹನಗಳು:

  • ಕೊಂಡಜ್ಜಿ ಭವನ ಆವರಣ.

  • ಶಿವಾಜಿನಗರ ಬಸ್‌ನಿಲ್ದಾಣದ ಮೇಲ್ಭಾಗದ ಮಲ್ಟಿಲೆವೆಲ್ ಪಾರ್ಕಿಂಗ್ ಸ್ಥಳ.

  • ಕಂಠೀರವ ಕ್ರೀಡಾಂಗಣ.

  • ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ.

  • ಸರ್ಕಾರಿ ಕಲಾ ಕಾಲೇಜು ಆವರಣ.

  • ಕಾರ್ಪೋರೇಷನ್ ಕಛೇರಿ ಸ್ಥಳ.

  • ಪ್ಯಾಲೇಸ್ ಮೈದಾನದ ಗೇಟ್ ನಂ. 2, 3 ಮತ್ತು 4 ರ ಆವರಣ.

5. ಭಾರೀ ವಾಹನಗಳ ಸಂಚಾರ ನಿಷೇಧ

ದಿನಾಂಕ: 03.06.2026 ರಂದು ಮಧ್ಯಾಹ್ನ 12:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಂಡು, ಸಂಚಾರ ನಿಷೇಧಿತ ಮಾರ್ಗಗಳನ್ನು ತಪ್ಪಿಸಿ, ಪೊಲೀಸ್ ಇಲಾಖೆ ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸುಗಮ ಸಂಚಾರಕ್ಕೆ ಸಹಕರಿಸಬೇಕಾಗಿ ಕೋರಲಾಗಿದೆ.

Share. Facebook Twitter LinkedIn WhatsApp Email

Related Posts

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

2 Mins Read

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

1 Min Read

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read
Recent News

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

State News
KARNATAKA

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲವೆಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯ ಇನ್ಮುಂದೆ ಇಲ್ಲ!…

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.