ನವದೆಹಲಿ: ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್ವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ.
ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ನಲ್ಲಿ (Lemon Green Restaurant) ಈ ದುರಂತ ಸಂಭವಿಸಿದೆ. ಬುಧವಾರ ಮುಂಜಾನೆ ಸುಮಾರು 8.50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಿನ ಉಪಾಹಾರದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ, ಘಟನೆಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ಮುಂಜಾನೆ ಸುಮಾರು 9.45 ಕ್ಕೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕರೆ ಬಂದ ತಕ್ಷಣ, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ನೆಹರೂ ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಭಾಗೀಯ ಅಧಿಕಾರಿ (DO) ರವೀಂದರ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ರೆಸ್ಟೋರೆಂಟ್ನ ಬೇಸ್ಮೆಂಟ್ನಲ್ಲಿ (ನೆಲಮನೆ) ಸಿಲುಕಿದ್ದ ಮೂವರನ್ನು ಸುರಕ್ಷಿತವಾಗಿ ರಕ್ಷಿಸಿ, ಕ್ಯಾಟ್ಸ್ (CATS) ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ದೆಹಲಿ ಪೊಲೀಸರ ಮಾಹಿತಿ ಪ್ರಕಾರ, ಕಟ್ಟಡದಿಂದ ಒಟ್ಟು 11 ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಸದ್ಯ ಅವರೆಲ್ಲರಿಗೂ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಏನೆಂಬುದು ಇನ್ನು ಪತ್ತೆಯಾಗಬೇಕಿದೆ.
#WATCH | Delhi | Death toll rises to 10 in Malviya Nagar restaurant fire incident, say Delhi Police.
Visuals from the site pic.twitter.com/sfrzsMzJIm
— ANI (@ANI) June 3, 2026








