ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಏಳು ತಿಂಗಳ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಮುಬಾರಕ್ (70) ಹಾಗೂ 7 ತಿಂಗಳ ಗಂಡು ಮಗು ಸಾವನ್ನಪ್ಪಿದೆ ಇನ್ನೂ ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








